ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಆರ್.ಪುರ: ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

Published 21 ಮೇ 2024, 21:14 IST
Last Updated 21 ಮೇ 2024, 21:14 IST
ಅಕ್ಷರ ಗಾತ್ರ

ಕೆ.ಆರ್.ಪುರ: ಸಮೀಪದ ದೇವಸಂದ್ರದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಮಗುವೊಂದು ಆಯತಪ್ಪಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ.

ಸುಬೀನಾ ಖಾಡ್ಕ(4) ಮೃತಪಟ್ಟ ಮಗು.

‘ನೇಪಾಳದಿಂದ ನಗರಕ್ಕೆ ನಾಲ್ಕು ವರ್ಷಗಳ ಹಿಂದೆ ಯೋಗಿಮಾನ್ ಬಹದ್ದೂರ್ ಖಾಡ್ಕಾ ದಂಪತಿ ಬಂದಿದ್ದರು. ದಂಪತಿ ದೇವಸಂದ್ರದಲ್ಲಿ ಬಾಡಿಗೆ ಮನೆ ಪಡೆದು ನೆಲೆಸಿದ್ದರು. ಸೋಮವಾರ ಯೋಗಿಮಾನ್ ಬಹದ್ದೂರ್ ಕೂಲಿ ಕೆಲಸಕ್ಕೆ ತೆರಳಿದ್ದರು. ತಾಯಿ ಮನೆಯಲ್ಲೇ ಇದ್ದರು. ಸಂಜೆ 5.45ರ ಸುಮಾರಿಗೆ ತಾಯಿ ಮಗುವನ್ನು ಮನೆಯಲ್ಲೇ ಬಿಟ್ಟು ಅಂಗಡಿಗೆ ತೆರಳಿದ್ದರು. ಆಗ ಮಗು ಮನೆಯ ಹಿಂಭಾಗದಲ್ಲಿ ತೆರೆದಿದ್ದ ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟಿದೆ’ ಎಂದು ಪೊಲೀಸರು ಹೇಳಿದರು.

‘ಹತ್ತು ನಿಮಿಷಗಳ ಬಳಿಕ ತಾಯಿ ಮನೆಗೆ ಬಂದಾಗ ಮಗು ಕಾಣಿಸಿರಲಿಲ್ಲ. ಹುಡುಕಾಟ ನಡೆಸಿದ್ದಾರೆ. ನೀರಿನ ಸಂಪು ಪರಿಶೀಲಿಸಿದಾಗ ಮಗುವಿನ ಮೃತದೇಹ ತೇಲುತ್ತಿತ್ತು’ ಎಂದು ಪೊಲೀಸರು ಹೇಳಿದರು.

ನೀರಿನ ತೊಟ್ಟಿಯನ್ನು ಸರಿಯಾಗಿ ಮುಚ್ಚದಿರುವುದೆ ಘಟನೆಗೆ ಕಾರಣ ಎನ್ನಲಾಗಿದೆ ಎಂದು ಪೊಲೀಸರು ಹೇಳಿದರು.

ಕೆ.ಆರ್.ಪುರ ಠಾಣೆಯಲ್ಲಿ ಪೊಲೀಸರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT