ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಡಿಯಿಂದ ಬಿದ್ದು ಬಾಲಕನಿಗೆ ಗಾಯ

Last Updated 10 ಮಾರ್ಚ್ 2023, 20:24 IST
ಅಕ್ಷರ ಗಾತ್ರ

ಬೆಂಗಳೂರು: ಕೆಂಗೇರಿ ಬಳಿಯ ಬಿಡಿಎ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ಎರಡನೇ ಮಹಡಿಯಿಂದ ಬಿದ್ದು ಮೂರು ವರ್ಷದ ಬಾಲಕ ರಾಹುಲ್ ತೀವ್ರ ಗಾಯಗೊಂಡಿದ್ದು, ರಾಜ ರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಬಾಲಕ ರಾಹುಲ್, ಕಲಬುರಗಿಯ ಶಿವಪ್ಪ ಹಾಗೂ ಅಂಬಿಕಾ ದಂಪತಿ ಮಗ. ಕೆಲಸ ಹುಡುಕಿಕೊಂಡು ಹಲವು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ದಂಪತಿ, ಬಿಡಿಎ ಎನ್‌ಕ್ಲೇವ್‌ ಅಪಾರ್ಟ್‌ಮೆಂಟ್ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ವಾಸವಿದ್ದರು. ಶುಕ್ರವಾರ ಬೆಳಿಗ್ಗೆ 11ರ ಸುಮಾರಿಗೆ ಬಾಲಕ ರಾಹುಲ್ ಮನೆ ಎದುರು ಆಟವಾಡುತ್ತಿದ್ದ. ಇದೇ ವೇಳೆ ಕಾಲು ಜಾರಿ ಬಿದ್ದಿದ್ದ. ತಲೆಗೆ ಪೆಟ್ಟಾಗಿ ರಕ್ತ ಸೋರುತ್ತಿತ್ತು. ಮಗುವನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT