ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಜಾತಿ ಬದಲು ಬ್ರಾಹ್ಮಣ ಎಂದು ನಮೂದಿಸಿ: ಸಚ್ಚಿದಾನಂದ ಮೂರ್ತಿ ಸಲಹೆ

Last Updated 9 ಸೆಪ್ಟೆಂಬರ್ 2020, 19:50 IST
ಅಕ್ಷರ ಗಾತ್ರ

ಬೆಂಗಳೂರು: 'ಜನಗಣತಿ ವೇಳೆ ಬ್ರಾಹ್ಮಣ ಸಮುದಾಯದವರು ಉಪಜಾತಿಗಳನ್ನು ನಮೂದಿಸುವುದರಿಂದ ಭವಿಷ್ಯದಲ್ಲಿ ಮಕ್ಕಳಿಗೆ ಅನ್ಯಾಯ ಆಗಲಿದೆ. ಉಪಜಾತಿ ಬದಲಿಗೆ ಬ್ರಾಹ್ಮಣ ಎಂದೇ ನಮೂದಿಸಬೇಕು' ಎಂದು ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ತಿಳಿಸಿದರು.

ಕೆಂಗೇರಿ ಉಪನಗರದ ಬ್ರಾಹ್ಮಣ ಸಭಾ ಬುಧವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

'ಬ್ರಾಹ್ಮಣರಿಗೆ ಸಿಗಬೇಕಾದ ಸರ್ಕಾರದ ಸವಲತ್ತುಗಳನ್ನು ಕೇಳುವುದು ಭಿಕ್ಷೆಯಲ್ಲ, ಅದು ನಮ್ಮ ಹಕ್ಕು. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಬ್ರಾಹ್ಮಣರ ಅಭಿವೃದ್ಧಿಗೆ ಸಹಕಾರ ನೀಡುವ ಭರವಸೆ ನೀಡಿದೆ' ಎಂದರು.

'ಮಂಡಳಿಯಿಂದ ಸಮುದಾಯದ ಅಡುಗೆಯವರು, ಪುರೋಹಿತರು, ಗುಡಿ ಕೈಗಾರಿಕೆ, ಕೃಷಿಗಾಗಿ ಹಲವು ಯೋಜನೆಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಕಾರ್ಯರೂಪಕ್ಕೆ ತರಲಾಗುವುದು' ಎಂದರು.

ಬ್ರಾಹ್ಮಣ ಸಭಾದ ಅಧ್ಯಕ್ಷ ಸುಧೀಂದ್ರ ಕುಮಾರ್, ‘ಬ್ರಾಹ್ಮಣ ಸಮುದಾಯ ಉಪಜಾತಿಗಳ ಮೂಲಕ ವಿಂಗಡಣೆಯಾಗದೆ, ಸಾಂಘಿಕ ಶಕ್ತಿಯ ಮೂಲಕ ಸಂಘಟನೆಗೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT