ಶನಿವಾರ, ಫೆಬ್ರವರಿ 29, 2020
19 °C

ಮಿದುಳು ನಿಷ್ಕ್ರಿಯ: ಯುವಕನ ಅಂಗಾಂಗ ದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೊಡ್ಡಬಳ್ಳಾಪುರ ಸಮೀಪ ಈಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಲೆಗೆ ಬಿದ್ದ ಗಂಭೀರ ಪೆಟ್ಟಿನಿಂದ ಮಿದುಳು ನಿಷ್ಕ್ರಿಯಗೊಂಡ ಯುವಕ ಸುಜನ್‌ (21 ವರ್ಷ) ಅಂಗಾಂಗಗಳನ್ನು ಪೋಷಕರು ದಾನ ಮಾಡಿದ್ದಾರೆ.

ಜ.17ರಂದು ದೊಡ್ಡಬಳ್ಳಾಪುರ ಬಳಿ ಬೈಕ್‌ನಿಂದ ಬಿದ್ದು, ಸಮೀಪದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ರವಾನಿಸಲಾಯಿತು. ಕೋಮಾದಲ್ಲಿದ್ದ ಅವರು, ಗುರುವಾರ ಮಿದುಳು ನಿಷ್ಕ್ರಿಯಗೊಂಡಿತ್ತು. ಹಾಗಾಗಿ ಪೋಷಕರು ಅವರರ ಅಂಗಾಂಗ ದಾನ ಮಾಡಲು ನಿರ್ಧರಿಸಿದರು. 

ಕರ್ನಾಟಕದ ಕಸಿ ಪ್ರಾಧಿಕಾರದ ‘ಜೀವನ ಸಾರ್ಥಕತೆ’ ಯೋಜನೆಯಡಿ ಒಂದು ಮೂತ್ರಪಿಂಡವನ್ನು ಅದೇ ಆಸ್ಪತ್ರೆಯ ರೋಗಿಯೊಬ್ಬರಿಗೆ ಕಸಿ ಮಾಡಲಾಗಿದೆ. ಮತ್ತೊಂದು ಮೂತ್ರಪಿಂಡ ಹಾಗೂ ಯಕೃತ್ತನ್ನು ಸಕ್ರ ಆಸ್ಪತ್ರೆಯ ರೋಗಿಗೆ ಕಸಿ ಮಾಡಲಾಗಿದೆ. ಎರಡು ಕಾರ್ನಿಯಾಗಳನ್ನು ಮಿಂಟೊ ಕಣ್ಣಿನ ಆಸ್ಪತ್ರೆಗೆ ಹಸ್ತಾಂತರಿಸಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು