ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಲ್ಲಾ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ ಚಾಲನೆ: ದಿನೇಶ್‌ ಗುಂಡೂರಾವ್‌

Published 11 ಮಾರ್ಚ್ 2024, 16:37 IST
Last Updated 11 ಮಾರ್ಚ್ 2024, 16:37 IST
ಅಕ್ಷರ ಗಾತ್ರ

ಬೆಂಗಳೂರು: ನಿಮ್ಹಾನ್ಸ್‌ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ನಿಮ್ಹಾನ್ಸ್ ಸಹಯೋಗದಲ್ಲಿ ಬಿಬಿಎಂಪಿ, ನಗರ ಜಿಲ್ಲಾ ಆಸ್ಪತ್ರೆ ಸೇರಿ ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದಲ್ಲಿ ಇದೊಂದು ಮಾದರಿ ಕಾರ್ಯಕ್ರಮವಾಗಲಿದೆ. ಮೆದುಳು ಹಾಗೂ ನರ ಸಮಸ್ಯೆಗಳಿಗೆ ರಾಜ್ಯದ ಜನರು ಬೆಂಗಳೂರಿನ ನಿಮ್ಹಾನ್ಸ್ ಗೆ ಬರಬೇಕಾಗಿತ್ತು. ಇದು ಹೆಚ್ಚಿನ ಒತ್ತಡ ನಿರ್ಮಾಣ ಮಾಡಿತ್ತು. ಈ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ, ಜಿಲ್ಲಾ ಮಟ್ಟದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಲು ಮೆದುಳು ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೇಳಿದರು.

ನಿಮ್ಹಾನ್ಸ್ ತಜ್ಞ ವೈದ್ಯರ ಸಲಹೆ ಪಡೆದುಕೊಂಡು ಜಿಲ್ಲಾ ಕೇಂದ್ರಗಳಲ್ಲಿಯೇ ಹೆಚ್ಚಿನ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. 

ಪಾರ್ಶ್ವವಾಯು, ಅಪಸ್ಮಾರ, ಮರೆವಿನ ಕಾಯಿಲೆ ಮತ್ತು ತಲೆನೋವು ಸೇರಿದಂತೆ ನರವೈಜ್ಞಾನಿಕ ಕಾಯಿಲೆಗಳ ಹೆಚ್ಚಾಗುತ್ತಿದೆ. ಇದನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಆರೋಗ್ಯ ಕೇಂದ್ರಗಳು ಸಹಕಾರಿಯಾಗಲಿವೆ. ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಪಿಸಿಯೋಥೆರಪಿಸ್ಟ್, ಸ್ಪೀಚ್ ಥೆರಪಿಸ್ಟ್, ಮನಶ್ಯಾಸ್ತ್ರಜ್ಞರು, ನರ್ಸ್ ಮತ್ತು ಜಿಲ್ಲಾ ಸಂಯೋಜಕರನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT