ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರ್ಯಾಂಡ್‌ ಬೆಂಗಳೂರು: ಒಳಚರಂಡಿ ಮಂಡಳಿ ವತಿಯಿಂದ ಆ. 10ರಂದು ಸಲಹಾ ಕಾರ್ಯಕ್ರಮ

Published 8 ಆಗಸ್ಟ್ 2023, 15:45 IST
Last Updated 8 ಆಗಸ್ಟ್ 2023, 15:45 IST
ಅಕ್ಷರ ಗಾತ್ರ

ಬೆಂಗಳೂರು: ‘ಬ್ರ್ಯಾಂಡ್‌ ಬೆಂಗಳೂರು’ ಕಾರ್ಯಕ್ರಮಕ್ಕೆ ನೋಡಲ್‌ ಏಜೆನ್ಸಿಯಾಗಿ ನೇಮಕವಾಗಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಆಗಸ್ಟ್‌ 10ರಂದು ಸಲಹಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ಕುಮಾರಸ್ವಾಮಿ ಲೇಔಟ್‌ನಲ್ಲಿರುವ ದಯಾನಂದ್‌ ಸಾಗರ್ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ನ ಪ್ರೇಮ್‌ ಚಂದ್ರ ಸಾಗರ್‌ ಸಭಾಂಗಣದಲ್ಲಿ ಬೆಳಿಗ್ಗೆ 9.30ಕ್ಕೆ ನಡೆಯಲಿದೆ.

ಸಂಸ್ಕರಿಸಿದ ತ್ಯಾಜ್ಯ ನೀರಿನ ಮರುಬಳಕೆ ಮಾಡುವ ಮೂಲಕ ಶುದ್ಧ ನೀರಿನ ಬಳಕೆಯ ಪ್ರಮಾಣ ಕಡಿಮೆಗೊಳಿಸುವುದು. ಭೂಮಿಯ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಮಳೆ ನೀರು ಸಂಗ್ರಹ ಅಳವಡಿಕೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು, ಮಳೆ ನೀರು ಶೇಖರಿಸಿ ಉಪಯೋಗಿಸುವುದು. ನಗರದ ಕೆರೆಗಳನ್ನು ಕುಡಿಯುವ ನೀರು ಸರಬರಾಜಿಗೆ ಬಳಸುವ ನಿಟ್ಟಿನಲ್ಲಿ ಆಲೋಚನೆ ಮಾಡುವುದು ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಸಾರ್ವಜನಿಕರು, ಕ್ಷೇಮಾಭಿವೃದ್ಧಿ ಸಂಘಗಳು, ಜಲ ತಜ್ಞರು, ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಬೋಧಕ ವರ್ಗದವರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT