ಕೆಲವು ಜಂಕ್ಷನ್‌ಗಳಲ್ಲಿ ಸಮಸ್ಯೆ
ಎಐ ತಂತ್ರಜ್ಞಾನ ಬಳಸಿಕೊಂಡು ನಗರದ ಹಲವು ಜಂಕ್ಷನ್‌ಗಳಲ್ಲಿ ಎಟಿಸಿಎಸ್ ಅಳವಡಿಕೆ ಮಾಡಲಾಗುತ್ತಿದೆ. ಸಣ್ಣ ಜಂಕ್ಷನ್‌ಗಳಲ್ಲೂ ಕಾಮಗಾರಿ ನಡೆಸಲಾಗುತ್ತಿದೆ. ಕೆಲವು ಜಂಕ್ಷನ್‌ಗಳಲ್ಲಿ ಈ ಎಟಿಸಿಎಸ್ ವೈಜ್ಞಾನಿಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ವಾಹನ ದಟ್ಟಣೆಯನ್ನು ಸರಿಯಾಗಿ ಗ್ರಹಿಸುತ್ತಿಲ್ಲ. ಅಲ್ಲದೇ ಏಕಾಏಕಿ ಹಸಿರು ದೀಪ ಬೆಳಗಿಸುತ್ತವೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಅಲ್ಲದೇ ಪಾದಚಾರಿಗಳಿಗೆ ಆಗುತ್ತಿರುವ ಸಮಸ್ಯೆಯನ್ನೂ ಪರಿಹರಿಸಬೇಕು ಎಂದು ವಾಹನ ಸವಾರರು ಆಗ್ರಹಿಸಿದ್ದಾರೆ.