ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಬ್ರ್ಯಾಂಡ್‌ ಬೆಂಗಳೂರು ಐಡಿಯಾಥಾನ್: ಅಂತಿಮ ಸುತ್ತು 13ರಂದು

Published 3 ಜನವರಿ 2024, 22:26 IST
Last Updated 3 ಜನವರಿ 2024, 22:26 IST
ಅಕ್ಷರ ಗಾತ್ರ

ಬೆಂಗಳೂರು: ‘ಬ್ರ್ಯಾಂಡ್‌ ಬೆಂಗಳೂರು ಐಡಿಯಾಥಾನ್ 2023’ ಸ್ಪರ್ಧೆಯ ಅಂತಿಮ ಸುತ್ತು ಇದೇ 13ರಂದು ನಡೆಯುವ ‘ಯೂತ್ ಲೀಡರ್‌ಶಿಪ್‌ ಸಮ್ಮೇಳನದಲ್ಲಿ ನಡೆಯಲಿದೆ.

ಈ ಸಮ್ಮೇಳನದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ‌ಶಾಲಾ ಮಕ್ಕಳ ಜತೆ ಸಂವಾದ ನಡೆಸಲಿದ್ದಾರೆ. ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ, ನಟ ರಮೇಶ್ ಅರವಿಂದ್, ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮವನ್ನು ಗ್ರೇಕ್ಯಾಪ್ಸ್ ನಾಲೆಡ್ಜ್ ಟ್ರೈಬ್ ಹಾಗೂ ಶಿಕ್ಷಣ ತಜ್ಞ ಗಿರಿ ಪಿಕ್ ಬ್ರೈನ್ ಬಾಲಸುಬ್ರಮಣಿಯಂ ನಡೆಸಿಕೊಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

50 ಶಾಲೆಗಳು ಐಡಿಯಾಥಾನ್ ಸ್ಪರ್ಧೆಗೆ ‌ಆಯ್ಕೆಯಾಗಿದ್ದವು. ನಂತರದ ಹಂತದ ಸ್ಪರ್ಧೆಯಿಂದ ಅಗ್ರ 25 ಶಾಲೆಗಳು ಸ್ಪರ್ಧೆಯಲ್ಲಿ ಮುಂದುವರಿದವು. ಈ ಶಾಲೆಗಳ ಪೈಕಿ ಬನಶಂಕರಿಯ ಪ್ರೆಸಿಡೆನ್ಸಿ ಶಾಲೆ, ಎಸ್‌ಜೆಆರ್‌ ಕೆಂಗೇರಿ ಪಬ್ಲಿಕ್ ಶಾಲೆ, ಆರ್ಕಿಡ್‌ ಇಂಟರ್‌ನ್ಯಾಷನಲ್‌ ಶಾಲೆ, ಸೇಂಟ್ ಮಾರ್ಕ್ಸ್ ಕಾನ್ವೆಂಟ್, ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆ ಬನಶಂಕರಿ, ಮಿತ್ರಾ ಅಕಾಡೆಮಿ, ಕಸ್ತೂರಿ ನಗರ ಪ್ರೆಸಿಡೆನ್ಸಿ ಶಾಲೆ ಅಂತಿಮ ಸುತ್ತಿಗೆ ಪ್ರವೇಶ ಪಡೆದಿವೆ.

ಬ್ರ್ಯಾಂಡ್‌ ಬೆಂಗಳೂರು ಯೋಜನೆಯ ಮೂಲಕ ಬೆಂಗಳೂರು ನಗರವನ್ನು ಸ್ವಚ್ಛ, ಹಸಿರು ಹಾಗೂ ಸುಸ್ಥಿರ ನಗರವಾಗಿ ಮಾರ್ಪಾಡು ಮಾಡುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಡಿ.ಕೆ. ಶಿವಕುಮಾರ್‌ ಅವರ ಪುತ್ರಿ ಐಶ್ವರ್ಯ ಡಿಕೆಎಸ್ ಹೆಗಡೆ ಈ ಕಾರ್ಯಕ್ರಮದ ರೂವಾರಿ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT