ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ತನ ಕ್ಯಾನ್ಸರ್: ಜಾಗೃತಿ ಮೂಡಿಸಿದ ಮಹಿಳೆಯರು

Last Updated 22 ಅಕ್ಟೋಬರ್ 2022, 16:08 IST
ಅಕ್ಷರ ಗಾತ್ರ

ಬೆಂಗಳೂರು:ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಪ್ರಯುಕ್ತ ಎಲೆಕ್ಟ್ರಾನಿಕ್ ಸಿಟಿಯ ಕಾವೇರಿ ಆಸ್ಪತ್ರೆ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನೂರಕ್ಕೂ ಅಧಿಕ ಮಹಿಳಾ ಬೈಕ್ ಸವಾರರು ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಿದರು.

ಕಬ್ಬನ್ ರಸ್ತೆಯಲ್ಲಿ ಆರಂಭಗೊಂಡು ಬೈಕ್ ರ್‍ಯಾಲಿ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಅಂತ್ಯಗೊಂಡಿತು. ಸ್ತನ ಕ್ಯಾನ್ಸರ್ ತಡೆಗಟ್ಟುವಿಕೆ, ರೋಗ ನಿರ್ಣಯ, ಚಿಕಿತ್ಸೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಎಸ್. ವಿಜಯ್ ಭಾಸ್ಕರನ್, ‘ಪಾಶ್ಚಾತ್ಯ ಜೀವನ ವಿಧಾನದಿಂದಾಗಿ ಇತ್ತೀಚಿನ ದಿನಗಳಲ್ಲಿ ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ.ಕಳಪೆ ಆಹಾರ ಪದ್ಧತಿ, ವಾಯುಮಾಲಿನ್ಯವೂ ಕ್ಯಾನ್ಸರ್‌ಗೆ ಕಾರಣವಾಗುತ್ತಿದೆ. 40 ವರ್ಷದೊಳಗಿನ ಮಹಿಳೆಯರಲ್ಲಿಯೂ ಸ್ತನ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ. ಪ್ರಾರಂಭಿಕ ಹಂತದಲ್ಲಿಯೇ ರೋಗ ಪತ್ತೆ ಮಾಡಿ, ಚಿಕಿತ್ಸೆ ಒದಗಿಸಿದಲ್ಲಿ ಕಾಯಿಲೆ ವಾಸಿ ಮಾಡಬಹುದು’ ಎಂದು ಹೇಳಿದರು.

‘ಸ್ತನ ಕ್ಯಾನ್ಸರ್ ಭಾರತೀಯ ಮಹಿಳೆಯರಲ್ಲಿ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಆಗಿದೆ. ಪ್ರತಿ 28 ಮಹಿಳೆಯರಲ್ಲಿ ಒಬ್ಬರಿಗೆ ತಮ್ಮ ಜೀವಿತಾವಧಿಯಲ್ಲಿ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT