ಇಲಾಖೆ ಹಮ್ಮಿಕೊಂಡಿರುವ ಸ್ತನ್ಯಪಾನ ಸಪ್ತಾಹಕ್ಕೆ ಚಾಲನೆ ದೊರೆತಿದ್ದು, ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ‘ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ತಾಯಿಯ ಎದೆಹಾಲು ಸಹಕಾರಿ. ಇದರಿಂದ ರೋಗ ನಿರೋಧಕ ಶಕ್ತಿ ಮಗುವಿನಲ್ಲಿ ಹೆಚ್ಚಳವಾಗಲಿದೆ. ಎದೆಹಾಲಿನಲ್ಲಿ ಮಗುವಿನ ಬೆಳವಣಿಗೆಗೆ ಬೇಕಾದ ಪೌಷ್ಟಿಕತೆ, ಖನಿಜಾಂಶ ಮತ್ತು ಹೇರಳವಾದ ನೀರಿನ ಅಂಶಗಳು ಅಡಕವಾಗಿವೆ. ಮಗುವಿಗೆ ಇದು ಮೊದಲ ಲಸಿಕೆಯಾಗಲಿದೆ. ಮೊದಲ ಮೂರು ದಿನದ ಹಾಲಿನಲ್ಲಿ ಹೆಚ್ಚು ರೋಗ ನಿರೋಧಕಗಳಿರಲಿದ್ದು, ಮಗುವಿನಲ್ಲಿ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅದೇ ರೀತಿ, ಸೋಂಕುಗಳಿಂದ ರಕ್ಷಣೆ ನೀಡುತ್ತದೆ. ಜನಿಸಿದ ಒಂದು ಗಂಟೆಯೊಳಗೆ ಹಾಲುಣಿಸಲು ಪ್ರಾರಂಭಿಸಿ, ಆರು ತಿಂಗಳವರೆಗೆ ಎದೆಹಾಲನ್ನು ಮಾತ್ರ ನೀಡಬೇಕು’ ಎಂದು ಇಲಾಖೆ ಹೇಳಿದೆ.