ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ–ಖಾತೆ ನೀಡಲು ಲಂಚ: ಮಧ್ಯವರ್ತಿ ಬಂಧನ

Last Updated 30 ಡಿಸೆಂಬರ್ 2021, 2:30 IST
ಅಕ್ಷರ ಗಾತ್ರ

ಬೆಂಗಳೂರು: ನಿವೇಶನವೊಂದರ ಖರೀದಿದಾರರಿಗೆ ಇ–ಖಾತಾ ನೀಡಲು ನೆಲಮಂಗಲ ನಗರಸಭೆಯ ಬಿಲ್‌ ಕಲೆಕ್ಟರ್‌ ಯಲ್ಲಪ್ಪ ಪರವಾಗಿ ₹ 15,000 ಲಂಚ ಪಡೆದ ಖಾಸಗಿ ಸಹಾಯಕ ಶಿವಕುಮಾರ್‌ ಎಂಬುವವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಾದಿಹಳ್ಳಿಯ ನಿವಾಸಿಯೊಬ್ಬರು ನೆಲಮಂಗಲ ನಗರಸಭೆ ವ್ಯಾಪ್ತಿಯಲ್ಲಿ ನಿವೇಶನ ಖರೀದಿಸಿದ್ದರು. ಆಸ್ತಿ ನೋಂದಣಿ ಬಳಿಕ ಇ–ಖಾತಾ ನೀಡುವಂತೆ ನಗರಸಭೆಗೆ ಅರ್ಜಿ ಸಲ್ಲಿಸಿದ್ದರು.

ಇ–ಖಾತಾ ನೀಡಲು ₹ 20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಯಲ್ಲಪ್ಪ, ₹ 5,000 ಮುಂಗಡವಾಗಿ ಪಡೆದಿದ್ದರು. ಉಳಿದ ಮೊತ್ತವನ್ನು ಶಿವಕುಮಾರ್‌ ಬಳಿ ನೀಡುವಂತೆ ಸೂಚಿಸಿದ್ದರು. ಈ ಬಗ್ಗೆ ಆಸ್ತಿ ಮಾಲೀಕರು ಎಸಿಬಿಗೆ ದೂರು ನೀಡಿದ್ದರು. ಬುಧವಾರ ಲಂಚ ಪಡೆಯುತ್ತಿದ್ದಾಗ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ಖಾಸಗಿ ವ್ಯಕ್ತಿಯನ್ನು ಬಂಧಿಸಿದರು. ಬಿಲ್‌ ಕಲೆಕ್ಟರ್‌ ತಲೆಮರೆಸಿಕೊಂಡಿದ್ದಾರೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT