ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಲ್ಯಾಟ್‌ ನೋಂದಣಿಗೆ ಲಂಚ: ಖಾಸಗಿ ವ್ಯಕ್ತಿಗಳ ಬಂಧನ

Last Updated 28 ಡಿಸೆಂಬರ್ 2021, 16:41 IST
ಅಕ್ಷರ ಗಾತ್ರ

ಬೆಂಗಳೂರು: ಫ್ಲ್ಯಾಟ್‌ ಒಂದನ್ನು ನೋಂದಣಿ ಮಾಡಲು ಆನೇಕಲ್‌ ಉಪ ನೋಂದಣಾಧಿಕಾರಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿ ಪರವಾಗಿ ₹ 25,000 ಲಂಚ ಪಡೆದ ಐಕಾನ್‌ ಹೋಮ್ಸ್‌ ಎಂಬ ಖಾಸಗಿ ರಿಯಲ್‌ ಎಸ್ಟೇಟ್‌ ಉದ್ಯಮದ ಇಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಂಗಳವಾರ ಬಂಧಿಸಿದೆ.

‘ಐಕಾನ್‌ ಹೋಮ್ಸ್‌ ಕಂಪನಿ ಆನೇಕಲ್‌ ಸಮೀಪ ನಿರ್ಮಿಸಿರುವ ವಸತಿ ಸಮುಚ್ಚಯದಲ್ಲಿ ಗಂಗಾನಗರದ ನಿವಾಸಿಯೊಬ್ಬರು ಫ್ಲ್ಯಾಟ್‌ ಖರೀದಿಸಿದ್ದರು. ಅದನ್ನು ನೋಂದಣಿ ಮಾಡಲು ಉಪ ನೋಂದಣಾಧಿಕಾರಿ ಕಚೇರಿಯ ಅಧಿಕಾರಿ ಮತ್ತು ಸಿಬ್ಬಂದಿಗೆ ₹ 25,000 ಲಂಚ ನೀಡುವಂತೆ ಐಕಾನ್‌ ಹೋಮ್ಸ್‌ನ ಗ್ರಾಹಕ ಸಂಪರ್ಕ ವ್ಯವಸ್ಥಾಪಕಿ ಶಿರೀಶಾ ಬೇಡಿಕೆ ಇಟ್ಟಿದ್ದರು. ಹಣವನ್ನು ಕಂಪನಿಯ ಕೋ–ಆರ್ಡಿನೇಟರ್‌ ಭರತ ಎಂಬುವವರಿಗೆ ತಲುಪಿಸುವಂತೆ ಸೂಚಿಸಲಾಗಿತ್ತು. ಈ ಕುರಿತು ಖರೀದಿದಾರರು ದೂರು ನೀಡಿದ್ದರು’ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ದೂರುದಾರರಿಂದ ಲಂಚ ಪಡೆಯುತ್ತಿದ್ದಾಗ ದಾಳಿಮಾಡಿದ ಎಸಿಬಿ ಅಧಿಕಾರಿಗಳು ಭರತ ಮತ್ತು ಶಿರೀಶಾ ಇಬ್ಬರನ್ನೂ ಬಂಧಿಸಿದ್ದಾರೆ. ಉಪ ನೋಂದಣಾಧಿಕಾರಿ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಪಾತ್ರದ ಕುರಿತು ತನಿಖೆ ಮುಂದುವರಿದಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT