ಲಂಚ ಪ್ರಕರಣ: ಬೆಸ್ಕಾಂ ಜೆ.ಇ ಬಂಧನ

ಬೆಂಗಳೂರು: ಕಟ್ಟಡವೊಂದಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಕಲ್ಪಿಸಲು ₹ 20,000 ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೋಲದೇವನಹಳ್ಳಿ ಉಪ ವಿಭಾಗದ ಕಿರಿಯ ಎಂಜಿನಿಯರ್ (ಜೆ.ಇ) ಮಹೇಶ್ವರಪ್ಪ ಎಂಬುವವರನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಮಂಗಳವಾರ ಬಂಧಿಸಿದೆ.
ಕಟ್ಟಡವೊಂದಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಕೋರಿ ಸುಂಕದಕಟ್ಟೆ ನಿವಾಸಿಯಾಗಿರುವ ವಿದ್ಯುತ್ ಗುತ್ತಿಗೆದಾರರೊಬ್ಬರು ಅರ್ಜಿ ಸಲ್ಲಿಸಿದ್ದರು. ಸರ್ಕಾರಿ ಶುಲ್ಕ ಮತ್ತು ಲಂಚ ಸೇರಿದಂತೆ ₹ 25,000 ನೀಡುವಂತೆ ಆರೋಪಿ ಬೇಡಿಕೆ ಇಟ್ಟಿದ್ದರು. ಈ ಕುರಿತು ಗುತ್ತಿಗೆದಾರರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ಸಲ್ಲಿಸಿದ್ದರು.
ಮಂಗಳವಾರ ದೂರುದಾರರಿಂದ ₹ 20,000 ಲಂಚ ಪಡೆಯುತ್ತಿದ್ದಾಗ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು, ಮಹೇಶ್ವರಪ್ಪ ಅವರನ್ನು ಬಂಧಿಸಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.