ಸೋಮವಾರ, ಅಕ್ಟೋಬರ್ 18, 2021
22 °C

ತೆರಿಗೆ ಅಧಿಕಾರಿ ಸೋಗಿನಲ್ಲಿ ಲಾರಿ ಮಾಲೀಕರ ಬಳಿ ಹಣಕ್ಕೆ ಬೇಡಿಕೆ: ವ್ಯಕ್ತಿಯ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಾಣಿಜ್ಯ ತೆರಿಗೆ ಅಧಿಕಾರಿ‌ ಎಂದು ಹೇಳಿಕೊಂಡು‌ ಲಾರಿ‌ ಮಾಲೀಕರ ಬಳಿ‌ ಹಣಕ್ಕೆ‌ ಬೇಡಿಕೆ ಇಡುತ್ತಿದ್ದ ಆರೋಪದಡಿ ಚೆನ್ನಪ್ಪ ಎಂಬವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

'ಆರೋಪಿ ಚೆನ್ನಪ್ಪ, ಲಾರಿ ಮಾಲೀಕರನ್ನು ಬೆದರಿಸುತ್ತಿದ್ದರು. ಹಣಕ್ಕೆ ಬೇಡಿಕೆ ಇರಿಸುತ್ತಿದ್ದರು. ಈ ಬಗ್ಗೆ ಲಾರಿ‌ ಮಾಲೀಕರೊಬ್ಬರು ದೂರು‌ ನೀಡಿದ್ದರು' ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

'ತನಿಖೆ‌ ಕೈಗೊಂಡು‌ ಆರೋಪಿಯನ್ನು  ಬಂಧಿಸಲಾಗಿದೆ. ನ್ಯಾಯಾಲಯಕ್ಕೆ‌ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ನ್ಯಾಯಾಲಯವನ್ನು‌ ಕೋರುತ್ತೇವೆ' ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು