ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲಂಚ: ಆಹಾರ ಇಲಾಖೆ ಉಪ ನಿರ್ದೇಶಕಿ ಪ್ರೀತಿ ಚಂದ್ರಶೇಖರ್ ಲೋಕಾಯುಕ್ತ ಬಲೆಗೆ

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಹಾಗೂ ಮಧ್ಯವರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
Published 15 ಜೂನ್ 2024, 4:26 IST
Last Updated 15 ಜೂನ್ 2024, 4:26 IST
ಅಕ್ಷರ ಗಾತ್ರ

ಬೆಂಗಳೂರು: ನ್ಯಾಯಬೆಲೆ ಅಂಗಡಿಯ ಪರವಾನಗಿ ರದ್ದತಿಯನ್ನು ಹಿಂಪಡೆಯಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕಿ ಹಾಗೂ ಮಧ್ಯವರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಪ್ರೀತಿ ಚಂದ್ರಶೇಖರ್ ಮತ್ತು ಮಧ್ಯವರ್ತಿ ರಮೇಶ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ನ್ಯಾಯಬೆಲೆ ಅಂಗಡಿಯೊಂದರ ಪರವಾನಗಿ ರದ್ದುಗೊಳಿಸಲಾಗಿತ್ತು. ಈ ರದ್ದತಿ ಆದೇಶ ಹಿಂಪಡೆಯಲು ಅಂಗಡಿಯ ಮಾಲೀಕರಿಗೆ ₹ 70 ಸಾವಿರ ಲಂಕ್ಕೆ ಬೇಡಿಕೆಯಿಟ್ಟಿದ್ದ ಪ್ರೀತಿ ಚಂದ್ರಶೇಖರ್, ಮುಂಗಡವಾಗಿ ₹50 ಸಾವಿರ ಪಡೆದುಕೊಂಡಿದ್ದರು. ಈ ಕುರಿತು ಅಂಗಡಿಯ ಮಾಲೀಕರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಈ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು, ಬಾಕಿ ₹ 20 ಸಾವಿರ ಪಡೆಯುತ್ತಿದ್ದ ಮಧ್ಯವರ್ತಿ ರಮೇಶ್ ಎಂಬಾತನನ್ನು ವಶಕ್ಕೆ ಪಡೆದರು. ಬಳಿಕ ಆತ ನೀಡಿದ ಮಾಹಿತಿ ಆಧರಿಸಿ ಪ್ರೀತಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ.

ಬಂಧಿತರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT