ಮಂಗಳವಾರ, ಅಕ್ಟೋಬರ್ 22, 2019
21 °C

ಜೆರಿಮಿ ಪಿಲ್‌ಮೋರ್ ಬ್ರಿಟಿಷ್‌ ಡೆಪ್ಯುಟಿ ಹೈಕಮಿಷನರ್‌

Published:
Updated:

ಬೆಂಗಳೂರು: ಕರ್ನಾಟಕ ಮತ್ತು ಕೇರಳ ವ್ಯಾಪ್ತಿಯನ್ನು ಹೊಂದಿರುವ ಬ್ರಿಟಿಷ್‌ ಡೆಪ್ಯುಟಿ ಹೈಕಮಿಷನರ್‌ ಆಗಿ ಜೆರಿಮಿ ಪಿಲ್‌ಮೋರ್ ಅವರು ಇಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.

ಇದುವರೆಗೆ ಚೆನ್ನೈಯಲ್ಲಿ ಡೆಪ್ಯುಟಿ ಹೈಕಮಿಷನರ್‌ ಆಗಿದ್ದರು. ಎರಡೂ ರಾಜ್ಯಗಳು ಬ್ರಿಟನ್‌ನೊಂದಿಗೆ ಇನ್ನಷ್ಟು ಉತ್ತಮ ಆರ್ಥಿಕ, ಶೈಕ್ಷಣಿಕ ಮತ್ತು ಇತರ ಕ್ಷೇತ್ರಗಳಲ್ಲಿ ಸಂಬಂಧ ಸಾಧಿಸುವುದಕ್ಕೆ ತಾವು ಶಕ್ತಿ ಮೀರಿ ಶ್ರಮಿಸುವುದಾಗಿ ಅವರು ತಿಳಿಸಿದ್ದಾರೆ.

‘ಕಳೆದ ವರ್ಷ ಬ್ರಿಟನ್‌ನ ಒಟ್ಟು ಹೂಡಿಕೆಯಲ್ಲಿ ರಾಜ್ಯ ಶೇ 38ರಷ್ಟುನ್ನು ಪಡೆದುಕೊಂಡಿತ್ತು. ಬ್ರಿಟನ್‌ನಲ್ಲಿ ಸಹ ಭಾರತದ ತಂತ್ರಜ್ಞಾನ ಮತ್ತು ಟೆಲಿಕಾಂ ಕಂಪನಿಗಳು ದೊಡ್ಡ ಪ್ರಮಾಣದಲ್ಲಿ ಹೂಡಿಕೆ ಮಾಡಿವೆ. ಇದನ್ನು ಮುಂದುವರಿಸುವ ನಿಟ್ಟಿನಲ್ಲಿ ಸೇವೆ ಸಲ್ಲಿಸಲಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)