ಭಾನುವಾರ, ಸೆಪ್ಟೆಂಬರ್ 27, 2020
28 °C

2 ವಾರದಲ್ಲಿ ಬ್ರಾಡ್‌ ವೇ ಆಸ್ಪತ್ರೆ ಸಜ್ಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕಿತರಿಗೆ ಶಿವಾಜಿನಗರದ ಬ್ರಾಡ್‌ ವೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲು ನಿರ್ಧರಿಸಲಾಗಿದ್ದು, ರೋಗಿಗಳಿಗೆ ಎರಡು ವಾರಗಳಲ್ಲಿ ಅಲ್ಲಿ ಚಿಕಿತ್ಸೆ ದೊರೆಯಲಿದೆ.

ವಿಕ್ಟೋರಿಯಾ ಹಾಗೂ ಬೌರಿಂಗ್ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೊನಾ ಸೋಂಕಿತರಿಗೆ ಮೀಸಲಿಡಲಾ
ಗಿದೆ. ಅದೇ ರೀತಿ, 16 ಸರ್ಕಾರಿ ಆಸ್ಪತ್ರೆಗಳಲ್ಲಿ ಕೋವಿಡ್ ಪೀಡಿತರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ. ಆದರೆ, ಸೋಂಕಿತರ ಸಂಖ್ಯೆ ಕೆಲದಿನಗಳಿಂದ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬ್ರಾಡ್‌ ವೇ ಆಸ್ಪತ್ರೆಯಲ್ಲಿ ಕೂಡ ಸೋಂಕಿತರಿಗೆ ಚಿಕಿತ್ಸೆ ಪ್ರಾರಂಭಿಸಲು ಸರ್ಕಾರ ನಿರ್ಧರಿಸಿದೆ. ಅಲ್ಲಿ ಒಟ್ಟು 200 ಹಾಸಿಗೆಗಳು ದೊರೆಯಲಿವೆ. ಈ ಆಸ್ಪತ್ರೆಗೆ ಇನ್ಫೋಸಿಸ್ ಪ್ರತಿಷ್ಠಾನ ₹ 30 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸಿದೆ. 

ಆಸ್ಪತ್ರೆಯಲ್ಲಿ ಮೊದಲ ಹಂತದಲ್ಲಿ ಹೈಫ್ಲೋ ಆಕ್ಸಿಜೆನ್ ಸಂಪರ್ಕ ಹೊಂದಿರುವ 180 ಹಾಸಿಗೆಗಳನ್ನು ಸಜ್ಜುಗೊಳಿಸಲಾಗುತ್ತಿದೆ. 30 ವೆಂಟಿಲೇಟರ್, ತೀವ್ರ ನಿಗಾ ಘಟಕ, ಸಿಟಿ ಸ್ಕ್ಯಾನ್ ಸೇರಿದಂತೆ ವಿವಿಧ ಸೌಲಭ್ಯಗಳಿರಲಿವೆ. ಹೃದಯ ಸೇರಿದಂತೆ ವಿವಿಧ ಶಸ್ತ್ರಚಿಕಿತ್ಸೆಗೆ ಪ್ರತ್ಯೇಕ ಶಸ್ತ್ರಚಿಕಿತ್ಸಾ ಘಟಕ ಕೂಡ ಸಿದ್ಧಗೊಳ್ಳುತ್ತಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು