ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿಗೆ ಶೆನ್‌ಜೆನ್‌ ನಗರದ ನಿಯೋಗ ಭೇಟಿ

Last Updated 10 ಸೆಪ್ಟೆಂಬರ್ 2019, 20:11 IST
ಅಕ್ಷರ ಗಾತ್ರ

ಬೆಂಗಳೂರು: ಚೀನಾದ ಶೆನ್‌ಜೆನ್ ಮುನಿಸಿಪಲ್ ಪೀಪಲ್ಸ್ ಗವರ್ನಮೆಂಟ್‌ನ ನಿಯೋಗವು ಮಂಗಳವಾರ ಬಿಬಿಎಂಪಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ವಿಚಾರ ವಿನಿಮಯ ನಡೆಸಿತು.

ಬಿಬಿಎಂಪಿ ಆಯುಕ್ತ‌ ಬಿ.ಎಚ್. ಅನಿಲ್ ಕುಮಾರ್ ಹಾಗೂ ಪಾಲಿಕೆಯ ಅಧಿಕಾರಿಗಳನ್ನು ಭೇಟಿಯಾದ ಶೆನ್‌ಜೆನ್‌ನ ವೈಸ್‌ ಮೇಯರ್‌ ಯಾಂಗ್ ಹಾಂಗ್ ನೇತೃತ್ವದ 7 ಸದಸ್ಯರ ನಿಯೋಗ, ಉಭಯ ನಗರಗಳು ಅಭಿವೃದ್ಧಿಯಲ್ಲಿ ಪರಸ್ಪರ ಸಹಕಾರ ನೀಡುವ ಕುರಿತು ಸಮಾಲೋಚನೆ ನಡೆಸಿತು.

‘ಚೀನಾದ ಶೆನ್‌ಜೆನ್ ನಗರದ ಕಸದಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. 5ಜಿ ತಂತ್ರಜ್ಞಾನದ ನೆರವಿನಿಂದ ಗ್ರಾಹಕ ಸೇವೆಗಳನ್ನು ಆನ್‌ಲೈನ್‌ ಮೂಲಕ ಒದಗಿಸಲಾಗುತ್ತಿದೆ’ ಎಂದು ಅವರು ತಿಳಿಸಿದರು.

ಕಸದಿಂದ ವಿದ್ಯುತ್ ಉತ್ಪಾದಿಸುವ ವಿಧಾ ನ,ಕೈಗಾರಿಕಾ ವಲಯಗಳಿಗೆ ಮೂಲಭೂತ ಸೌಕರ್ಯ, ರಸ್ತೆ, ಸಾಫ್ಟ್‌ವೇರ್ ಪಾರ್ಕ್ ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅವರು ಮಾಹಿತಿ ನೀಡಿದರು. ಶೆನ್‌ಜೆನ್‌ಗೆ ಬರುವಂತೆ ಪಾಲಿಕೆ ಅಧಿಕಾರಿಗಳಿಗೆ ಆಹ್ವಾನ ನೀಡಿದರು.

ಉದ್ಯಾನನಗರಿ ಬೆಂಗಳೂರು ಮಾಹಿತಿ ತಂತ್ರಜ್ಞಾನದ ಕೇಂದ್ರವಾಗಿ ಬೆಳೆದ ಬಗೆಯನ್ನು ಅನಿಲ್ ಕುಮಾರ್ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT