ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರಿಗೂ ಪರಿಹಾರ: ಸಿಎಂ ಯಡಿಯೂರಪ್ಪ ಸೂಚನೆ

Last Updated 30 ಜುಲೈ 2020, 20:09 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌–19 ಕರ್ತವ್ಯ ನಿರತ ಅವಶ್ಯಕ ಇಲಾಖೆಗಳ ಅಧಿಕಾರಿ, ನೌಕರರು ಮತ್ತು ಶಿಕ್ಷಕರು ಮೃತರಾದರೆ ಅವರ ಕುಟುಂಬಕ್ಕೆ ವಿಮೆ ಮತ್ತು ಪರಿಹಾರ ನೀಡುವ ಮೊತ್ತದ ಬಗ್ಗೆ ಪ್ರಸ್ತಾವ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಆರೋಗ್ಯ, ನಗರಾಭಿವೃದ್ಧಿ ಮತ್ತು ಪೊಲೀಸ್‌ ಇಲಾಖೆ ನೌಕರರಿಗೆ ಮಾತ್ರ ಪರಿಹಾರ ನೀಡಲಾಗುತ್ತಿದೆ. ಆದರೆ, ಇತರ ಹಲವು ಇಲಾಖೆ ಅಧಿಕಾರಿಗಳು ಮತ್ತು ನೌಕರರು ಕೋವಿಡ್‌ –19 ಕರ್ತವ್ಯದಲ್ಲಿ ಸಕ್ರಿಯರಾಗಿದ್ದಾರೆ. ಕೋವಿಡ್‌ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕರೂ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರ ಕುಟುಂಬದವರಿಗೂ ಪರಿಹಾರ/ವಿಮೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT