ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲೇ ‘ಏರೋ ಇಂಡಿಯಾ 2021’: ರಾಜನಾಥ್‌ಗೆ ಬಿಎಸ್‌ವೈ ಮನವಿ

Last Updated 6 ಮಾರ್ಚ್ 2020, 19:35 IST
ಅಕ್ಷರ ಗಾತ್ರ

ನವದೆಹಲಿ: ‘ಏರೋ ಇಂಡಿಯಾ 2021’ ವೈಮಾನಿಕ ಪ್ರದರ್ಶನದ 13ನೇ ಆವೃತ್ತಿಯನ್ನು ಬೆಂಗಳೂರಿನಲ್ಲೇ ಆಯೋಜಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರೊಂದಿಗೆ ಸಂಜೆ ಇಲ್ಲಿಗೆ ಆಗಮಿಸಿದ ಸಂದರ್ಭ ರಕ್ಷಣಾ ಸಚಿವರನ್ನು ಭೇಟಿ ಮಾಡಿದ ಅವರು ಈ ಸಂಬಂಧ ಚರ್ಚೆ ನಡೆಸಿದರು.

ಫೆಬ್ರುವರಿ ತಿಂಗಳಲ್ಲಿ ವೈಮಾನಿಕ ಪ್ರದರ್ಶನ ಏರ್ಪಡಿಸಲು ಅನುವಾಗುವಂತೆ ಮುಂಚಿತವಾಗಿಯೇ ಸೂಕ್ತ ದಿನಾಂಕ ನಿಗದಿಪಡಿಸಿದಲ್ಲಿ ಅಗತ್ಯ ತಯಾರಿ ನಡೆಸಲು ಸಹಾಯಕವಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು.

ಅಲ್ಲದೆ, ಲ್ಯಾಂಗ್‌ಫೋರ್ಡ್‌ ಟೌನ್ ಬಳಿ ಬೆಂಗಳೂರು ಮೆಟ್ರೊ ನಿಲ್ದಾಣದ ಕಾಮಗಾರಿಗಾಗಿ ಅಗತ್ಯವಿರುವ ರಕ್ಷಣಾ ಇಲಾಖೆಯ ಜಮೀನನ್ನು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಲು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗಮನ ಹರಿಸುವಂತೆಯೂ ಇದೇ ವೇಳೆ ಮನವಿ ಸಲ್ಲಿಸಲಾಯಿತು.

ಭೂಮಿ ಹಸ್ತಾಂತರ ಕೋರಿ 2018ರಲ್ಲೇ ರಕ್ಷಣಾ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ ನಿರ್ಣಯ ಕೈಗೊಂಡಿರುವ ರಕ್ಷಣಾ ಮಂಡಳಿಯು ಸಚಿವಾಲಯಕ್ಕೆ ಪತ್ರ ಬರೆದಿದೆ. ಶೀಘ್ರವೇ ಪರಿಶೀಲನೆ ನಡೆಸಿ ಅನುಮೋದನೆ ನೀಡಬೇಕೆಂದು ಯಡಿಯೂರಪ್ಪ ಅವರು ಆಗ್ರಹಿಸಿದರು.

ಭೇಟಿಯ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪುತ್ರಿಯ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ ಯಡಿಯೂರಪ್ಪ ರಾತ್ರಿ ಬೆಂಗಳೂರಿಗೆ ಮರಳಿದರು.

ಅಲ್ಲದೆ, ಲ್ಯಾಂಗ್‌ಫೋರ್ಡ್‌ ಟೌನ್ ಬಳಿ ಬೆಂಗಳೂರು ಮೆಟ್ರೊ ನಿಲ್ದಾಣದ ಕಾಮಗಾರಿಗಾಗಿ ಅಗತ್ಯವಿರುವ ರಕ್ಷಣಾ ಇಲಾಖೆಯ ಜಮೀನನ್ನು ರಾಜ್ಯ

ಸರ್ಕಾರಕ್ಕೆ ಹಸ್ತಾಂತರಿಸಲು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಗಮನ ಹರಿಸು ವಂತೆಯೂ ಇದೇ ವೇಳೆ ಮನವಿ ಸಲ್ಲಿಸಲಾಯಿತು.

ಭೂಮಿ ಹಸ್ತಾಂತರ ಕೋರಿ 2018ರಲ್ಲೇ ರಕ್ಷಣಾ ಸಚಿವಾಲಯಕ್ಕೆ ಮನವಿ ಸಲ್ಲಿಸಲಾಗಿದೆ. ಈ ಸಂಬಂಧ ನಿರ್ಣಯ ಕೈಗೊಂಡಿರುವ ರಕ್ಷಣಾ ಮಂಡಳಿಯು ಸಚಿವಾಲಯಕ್ಕೆ ಪತ್ರ ಬರೆದಿದೆ. ಶೀಘ್ರವೇ ಪರಿಶೀಲನೆ ನಡೆಸಿ ಅನುಮೋದನೆ ನೀಡಬೇಕೆಂದು ಯಡಿಯೂರಪ್ಪ ಅವರು ಆಗ್ರಹಿಸಿದರು.

ಭೇಟಿಯ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಪುತ್ರಿಯ ವಿವಾಹ ಸಮಾರಂಭದಲ್ಲಿ
ಭಾಗವಹಿಸಿದ ಯಡಿಯೂರಪ್ಪ ರಾತ್ರಿ ಬೆಂಗಳೂರಿಗೆ ಮರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT