ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊರರಾಜ್ಯದವರನ್ನು ತಡೆದಿದ್ದರೆ ಸೋಂಕು ನಿಯಂತ್ರಣ: ಯಡಿಯೂರಪ್ಪ

ಮಾಸ್ಕ್ ದಿನಾಚರಣೆಗೆ ಸಿಎಂ ಚಾಲನೆ 
Last Updated 18 ಜೂನ್ 2020, 3:23 IST
ಅಕ್ಷರ ಗಾತ್ರ

ಬೆಂಗಳೂರು:ಮುಖಗವಸು ಧರಿಸುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಸ್ಕ್ ದಿನಾಚರಣೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು.

ವಿಧಾನಸೌಧದ ಎದುರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿದರು.

ವಿಧಾನಸೌಧದಿಂದ ಕೆ.ಆರ್. ವೃತ್ತದವರೆಗೆ ಪಾದಯಾತ್ರೆ ನಡೆಸಿದ ಮುಖ್ಯಮಂತ್ರಿ, ಮುಖಗವಸು ಹಾಕಿಕೊಳ್ಳುವುದರಿಂದ ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಬಹುದು. ವಿಶ್ವ ಆರೋಗ್ಯ ಸಂಸ್ಥೆಯೂ ಇದನ್ನು ಒತ್ತಿ ಹೇಳಿದೆ' ಎಂದರು.

‘ಕೋವಿಡ್–19 ನಿಯಂತ್ರಣಕ್ಕೆ ಸರ್ಕಾರ ಎಲ್ಲ ಕ್ರಮ ಕೈಗೊಂಡಿದೆ. ನಾವು ಕೈಗೊಂಡ ಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಶ್ಲಾಘಿಸಿದ್ದಾರೆ. ಸೋಂಕು ನಿಯಂತ್ರಿಸಲು ಸರ್ಕಾರಕ್ಕೆ ಎಲ್ಲರ ಸಹಕಾರ ಅಗತ್ಯವಿದೆ’ಎಂದು ಅವರು ಹೇಳಿದರು.

‘ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯಲು ಎಲ್ಲ ಪರಿಹಾರ ಕ್ರಮಗಳನ್ನು ಕೈಗೊಂಡಿದ್ದೇವೆ. ಹೊರ ರಾಜ್ಯದಿಂದ ಜನ ಬಾರದೇ ಇದ್ದಿದ್ದರೆ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿರುತ್ತಿತ್ತು’ಎಂದು ಅವರು ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬಿಬಿಎಂಪಿ ವತಿಯಿಂದ ಕಾರ್ಯಕ್ರಮ ನಡೆಯಿತು.

ಸಚಿವರಾದ ಶ್ರೀರಾಮುಲು, ಆರ್. ಅಶೋಕ್, ಸಿ.ಟಿ. ರವಿ, ಎಸ್.ಟಿ.ಸೋಮಶೇಖರ್‌ ಹಾಗೂ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ನಟ ಪುನೀತ್‌ ರಾಜಕುಮಾರ್‌, ನಟಿ ರಾಗಿಣಿ ದ್ವಿವೇದಿಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT