ಸೋಮವಾರ, ಡಿಸೆಂಬರ್ 16, 2019
17 °C

ಎಲ್ಲ ಜಿಲ್ಲೆಗಳಲ್ಲೂ ಪೋಷಣ್ ಅಭಿಯಾನ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ‘ಪೋಷಣ್‌ ಅಭಿಯಾನ’ ಕಾರ್ಯಕ್ರಮಗಳನ್ನು ಜಾರಿ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅಧ್ಯಕ್ಷತೆಯಲ್ಲಿ ನಡೆದ ಪೋಷಣ್‌ ಅಭಿಯಾನ ಯೋಜನೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, 19 ಜಿಲ್ಲೆಗಳಲ್ಲಿ ಯೋಜನೆಯ ಜಾರಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಉಳಿದ 11 ಜಿಲ್ಲೆಗಳಲ್ಲೂ ಆದಷ್ಟು ಬೇಗ ಜಾರಿ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರತಿ 1,000 ಶಿಶುಗಳಿಗೆ ಮರಣ ಹೊಂದುವ ಪ್ರಮಾಣ 50 ರಿಂದ 25 ಕ್ಕೆ ಇಳಿದಿದೆ. ಈ ಪ್ರಮಾಣ ಇನ್ನಷ್ಟು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ತಾಯಿ ಮತ್ತು ಶಿಶುಗಳ ಆರೋಗ್ಯ ಸುಧಾರಣೆಗೆ ಪೂರಕವಾದ ಪೋಷಣ್ ಅಭಿಯಾನ ಮತ್ತು ಮಾತೃಪೂರ್ಣ ಮುಂತಾದ ಯೋಜನೆಗಳ ವ್ಯವಸ್ಥಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಪೋಷಣ್‌ ಅಭಿಯಾನದಿಂದ ಶಿಶು ಮತ್ತು ತಾಯಂದಿರ ಮರಣ ಪ್ರಮಾಣ ತಗ್ಗಿಸಲು ಸಾಧ್ಯ. ಇದರಿಂದ ಸ್ವಸ್ಥ ಸಮಾಜ ನಿರ್ಮಿಸಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಗಳು ಒಂದಾಗಿ ಯೋಜನೆ ಅನುಷ್ಠಾನಕ್ಕೆ ಸಹಕರಿಸಬೇಕು ಎಂದು ಸ್ಮೃತಿ ಇರಾನಿ ಮನವಿ ಮಾಡಿದರು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು