ನಂತರ ಮಾತನಾಡಿದ ಅವರು, ಗಡಿಭದ್ರತಾ ಪಡೆಯ 565 ಸಿಬ್ಬಂದಿ, ರೇಡಿಯೊ ಆಪರೇಟರ್ ವಿಭಾಗದಲ್ಲಿ ತರಬೇತಿ ಪಡೆದು, ದೇಶದ ವಿವಿಧ ಭಾಗಗಳಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಳ್ಳಲು ಸಿದ್ಧರಾಗಿದ್ದಾರೆ. ದೈಹಿಕ ಮತ್ತು ಮಾನಸಿಕ ಸೇರಿದಂತೆ ವಿವಿಧ ವಿಷಯಗಳಲ್ಲಿ 40 ವಾರಗಳ ಕಠಿಣ ತರಬೇತಿ ಪಡೆದಿದ್ದಾರೆ. ಇವರೆಲ್ಲರೂ ಸುರಕ್ಷತೆ ಮತ್ತು ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ತಿಳಿಸಿದರು.