ಭಾನುವಾರ, ನವೆಂಬರ್ 29, 2020
25 °C

ವಿದ್ಯಾರ್ಥಿಗಳಿಗೆ ಸಿ.ಎಂ ಬಿಎಸ್‌ವೈ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ಮನೆಗಳಿಗೆ ಪ್ರವಾಹದ ನೀರು ನುಗ್ಗಿ ವಿದ್ಯಾರ್ಥಿಗಳ ನೋಟ್‌ ಪುಸ್ತಕಗಳು ಮತ್ತು ಪಠ್ಯಪುಸ್ತಕಗಳು ಕೊಚ್ಚಿ ಹೋದ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಓದಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಆ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕಗಳು ಮತ್ತು ಆರ್ಥಿಕ ಸಹಾಯ ನೀಡಿದರು.

ತಮ್ಮ ಗೃಹಕಚೇರಿ ‘ಕೃಷ್ಣಾ’ಗೆ ನಾಲ್ವರು ವಿದ್ಯಾರ್ಥಿಗಳನ್ನು ಕರೆಸಿಕೊಂಡ ಯಡಿಯೂರಪ್ಪ ಪುಸ್ತಕಗಳನ್ನು ವಿತರಿಸಿದರು. ನಷ್ಟಕ್ಕೆ ಒಳಗಾದ ಇತರ ಕುಟುಂಬಗಳಿಗೂ ಪರಿಹಾರದ ಚೆಕ್‌ ವಿತರಿಸಲಾಗಿದೆ ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.