ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಚಿನ್ನಾಭರಣ ಮಳಿಗೆಗಳಿಗೆ ತೆರಳಿ ಮಾಲೀಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ಕಳವು ಮಾಡುತ್ತಿದ್ದ ಬಿ.ಟೆಕ್ ಪದವೀಧರನನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಿಚರ್ಡ್ (25) ಬಂಧಿತ ಆರೋಪಿ.

ಆರೋಪಿಯಿಂದ ₹13 ಲಕ್ಷ ಮೌಲ್ಯದ 134 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಕೊಡಗಿನ ವಿರಾಜಪೇಟೆಯ ನೆಹರೂ ನಗರದ ನಿವಾಸಿ ರಿಚರ್ಡ್ ನಗರದ ಖಾಸಗಿ ಕಾಲೇಜಿನಲ್ಲಿ ಬಿ.ಟೆಕ್ ಪದವಿ ಪಡೆದಿದ್ದ. ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಆತನಿಗೆ ₹1 ಲಕ್ಷ ಸಂಬಳವಿತ್ತು. ಹಣದಾಸೆಗಾಗಿ ಕೆಲಸ ಬಿಟ್ಟು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದರು.

‘ಬ್ರ್ಯಾಂಡೆಡ್ ವಸ್ತುಗಳ ಖರೀದಿ ವ್ಯಾಮೋಹಕ್ಕೆ ಬಿದ್ದು ಅಡ್ಡದಾರಿ ತುಳಿದಿದ್ದ. ಸುಲಭವಾಗಿ ಹಣ ಗಳಿಸಲು ಹಾಗೂ ಮೋಜು ಜೀವನ ನಡೆಸಲು ಕಳ್ಳತನ ಮಾಡುತ್ತಿದ್ದ’ ಎಂದು ಪೊಲೀಸರು ತಿಳಿಸಿದರು.

ಗ್ರಾಹಕನ ಸೋಗಿನಲ್ಲಿ ಆರೋಪಿಯು ಭದ್ರತಾ ಸಿಬ್ಬಂದಿಗಳಿಲ್ಲದ ಚಿನ್ನಾಭರಣ ಅಂಗಡಿಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದ. ಖರೀದಿ ನೆಪದಲ್ಲಿ ತರಹೇವಾರಿ ವಿನ್ಯಾಸವಿರುವ ಚಿನ್ನಾಭರಣಗಳನ್ನು ತೋರಿಸುವಂತೆ ಸಿಬ್ಬಂದಿಗೆ ಹೇಳುತ್ತಿದ್ದ. ಬಳಿಕ ಸಿಬ್ಬಂದಿಯ ಗಮನವನ್ನು ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ. ಆರೋಪಿಯ ವಿರುದ್ಧ ಕೇರಳದ ಕೋಟಯಂ ಸೇರಿದಂತೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 9 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.