ಬೆಂಗಳೂರು: ರಂಗಭೂಮಿ ಕಲಾವಿದರಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಲಾದ ಕ್ರಿಕೆಟ್ ಸ್ಪರ್ಧೆಯನ್ನು ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್ ಉದ್ಘಾಟಿಸಿದರು.

‘ವಿಶ್ವವಿದ್ಯಾಲಯದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಸ್ಪರ್ಧೆ ಆಯೋಜಿಸಲಾಗಿದೆ. ಪ್ರದರ್ಶನ ಕಲಾ ವಿಭಾಗದವರು ನೃತ್ಯ, ಸಂಗೀತ, ನಾಟಕ ಕಲೆಗಳ ಮೂಲಕ ಜನರ ಮನಸ್ಸಿಗೆ ಮುದ ನೀಡುತ್ತಾರೆ. ಈ ಕಲಾವಿದರು ಕ್ರಿಕೆಟ್‌ನಂತಹ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಒತ್ತಡ ಕಡಿಮೆ ಮಾಡಿಕೊಳ್ಳಬೇಕು’ ಎಂದು ಕುಲಪತಿ ಹೇಳಿದರು.

ಚಲನಚಿತ್ರ ಮತ್ತು ರಂಗಭೂಮಿ ನಿರ್ದೇಶಕ ಟಿ.ಎಸ್. ನಾಗಾಭರಣ ಮಾತನಾಡಿದರು. ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಕೃಷ್ಣಸ್ವಾಮಿ, ಪ್ರದರ್ಶನ ಕಲಾವಿಭಾಗದ ಮುಖ್ಯಸ್ಥರಾದ ಡಾ.ಎಸ್.ಎನ್. ಸುಶೀಲಾ,ಪ್ರದರ್ಶನ ಕಲಾವಿಭಾಗದ ಹಿರಿಯ ವಿದ್ಯಾರ್ಥಿ ಹರ್ಷ ಭಾಗವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.