ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ ಘೋಷಣೆ ಕೈಬಿಡಲು ಎನ್‌ಎಸ್‌ಯುಐ

Last Updated 26 ಫೆಬ್ರುವರಿ 2019, 19:56 IST
ಅಕ್ಷರ ಗಾತ್ರ

ಬೆಂಗಳೂರು: ಆನ್‌ಲೈನ್‌ನಲ್ಲಿ ಮಾತ್ರ ಪ್ರಮಾಣಪತ್ರ ವಿತರಿಸುವ ವ್ಯವಸ್ಥೆಯು ಯುಜಿಸಿ (ವಿಶ್ವವಿದ್ಯಾಲಯ ಅನುದಾನ ಆಯೋಗದ) ನಿರ್ದೇಶನಗಳಿಗೆ ವಿರುದ್ಧವಾಗಿದೆ.

ಹೀಗಾಗಿ, ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಈ ಯೋಜನೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿ ಎನ್‌ಎಸ್‌ಯುಐ ರಾಜ್ಯ ಘಟಕದ ಅಧ್ಯಕ್ಷ ಎನ್‌.ಎಸ್‌. ಮಂಜುನಾಥ್‌ ನೇತೃತ್ವದ ನಿಯೋಗ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮನವಿ ಸಲ್ಲಿಸಿತು.

ಯುಜಿಸಿ ಉಚಿತವಾಗಿ ಲಭ್ಯವಿರುವ ಡಿಜಿಟಲ್‌ ಪ್ರಮಾಣ ಪತ್ರಗಳ ಕೋಶವನ್ನು ಆರಂಭಿಸಿದೆ. ಇದೇ ರೀತಿಯ ಇನ್ನೊಂದು ಕೋಶ ಆರಂಭಿಸಿ, ವಿದ್ಯಾರ್ಥಿಗಳಿಂದ ಪ್ರತ್ಯೇಕ ಶುಲ್ಕ ಸಂಗ್ರಹಿಸುವ ಅಗತ್ಯ ಇಲ್ಲ. ಅಲ್ಲದೆ, ಸುಪ್ರೀಂ ಕೋರ್ಟ್‌ ಆದೇಶದ ಪ್ರಕಾರ ಪ್ರಮಾಣ ಪತ್ರಗಳಲ್ಲಿ ಆಧಾರ್‌ ಬಳಸಬಾರದು ಎಂದು ಯುಜಿಸಿ ಎಲ್ಲ ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿದೆ ಎಂದೂ ಮನವಿಯಲ್ಲಿ ನಿಯೋಗ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT