ಬೆಂಗಳೂರು: ‘ಈ ಬಾರಿಯ ಬಜೆಟ್‌ನಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯ ಕ್ಷೇತ್ರವನ್ನು ಕಡೆಗಣಿಸಲಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಕನ್ನಡಪರ ಚಟುವಟಿಕೆಗಳನ್ನು ಅಯೋಜಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೆಚ್ಚಿನ ಅನುದಾನವನ್ನು ಒದಗಿಸಬೇಕಿತ್ತು. ಆದರೆ, ಕನ್ನಡ-ಕನ್ನಡಿಗ-ಕರ್ನಾಟಕದ ಹಿತರಕ್ಷಣೆಯನ್ನು ಕಡೆಗಣಿಸಿರುವುದು ಸ್ಪಷ್ಟವಾಗಿ ಕಾಣುತ್ತಿದೆ’ ಎಂದು ಹೇಳಿದ್ದಾರೆ.

‘ಮುಂಬರುವ ಜೂನ್ 7ರಿಂದ 9ರವರೆಗೆ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ. ಈ ಸಮ್ಮೇಳನಕ್ಕೆ ₹30 ಕೋಟಿ ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕಸಾಪ ಪ್ರಸ್ತಾವನೆಯನ್ನು ಪರಿಗಣಿಸದೆ ಇರುವುದು ಆಘಾತ ಉಂಟುಮಾಡಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.