ಬೆಂಗಳೂರು:ಆರ್.ಟಿ.ನಗರದ ಟ್ಯಾಗೋರ್ ಉದ್ಯಾನದೊಳಗೆ ಮೂರು ಅಂತಸ್ತಿನ ಆಂಗನವಾಡಿ ಕಟ್ಟಡದ ನಿರ್ಮಾಣಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆ ನೀಡಿದೆ.

ನಿವೃತ್ತ ನೌಕರ ಎಸ್.ಆರ್. ವರಂಬಲ್ಲಿ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಬಿಬಿಎಂಪಿಗೆ ನೋಟಿಸ್ ನೀಡಲು ಆದೇಶಿಸಿತು.

ಆರ್.ಟಿ. ನಗರದ 3ನೇ ಮತ್ತು 1ನೇ ಕ್ರಾಸ್ಗಳ ನಡುವಿನ ಉದ್ಯಾನದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲಾಗುತ್ತಿದೆ. ಇದು ಕರ್ನಾಟಕ ಆಟದ ಮೈದಾನಗಳು ಮತ್ತು ಮುಕ್ತ ಸ್ಥಳಗಳ(ಸಂರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆಯ ಉಲ್ಲಂಘನೆ ಎಂದು ಅರ್ಜಿದಾರರು ದೂರಿದ್ದಾರೆ.

ನೋಟಿಸ್ ಜಾರಿಗೊಳಿಸಿದ ಪೀಠ, ನವೆಂಬರ್ 5ರವರೆಗೆ ಯಾವುದೇ ನಿರ್ಮಾಣ ಕಾಮಗಾರಿ ಕೈಗೊಳ್ಳದಂತೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.