ಬೆಂಗಳೂರು: ಎಂಟನೇ ಮೈಲಿ ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದ ಖಾಸಗಿ ಬಸ್ಸೊಂದು, ರಸ್ತೆ ಪಕ್ಕದಲ್ಲಿದ್ದ ನಿಲ್ದಾಣಕ್ಕೆ ನುಗ್ಗಿ ಪ್ರಯಾಣಿಕರಿಗೆ ಗುದ್ದಿದೆ. ಭಾನುವಾರ ಸಂಜೆ ನಡೆದಿರುವ ಈ ಅಪಘಾತದಲ್ಲಿ ಪ್ರಯಾಣಿಕ ಜ್ಞಾನಪ್ಪ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ತೀವ್ರವಾಗಿ ಗಾಯಗೊಂಡಿದ್ದಾರೆ.

‘ಅತೀ ವೇಗವಾಗಿ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದ ಆರೋಪದಡಿ ಚಾಲಕ ದೇವರಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ’ ಎಂದು ಪೀಣ್ಯ ಸಂಚಾರ ಠಾಣೆ ಪೊಲೀಸರು ಹೇಳಿದರು.

‘ಹೆಸರುಘಟ್ಟ ಮುಖ್ಯರಸ್ತೆಗೆ ಹೊಂದಿಕೊಂಡಿರುವ ತಂಗುದಾಣದಲ್ಲಿ ಲಿಂಗಸೂರಿನ ಜ್ಞಾನಪ್ಪ ಸೇರಿ 10ಕ್ಕೂ ಹೆಚ್ಚು ಪ್ರಯಾಣಿಕರು ನಿಂತಿದ್ದರು. ಅದೇ ಮಾರ್ಗವಾಗಿ ಬರುತ್ತಿದ್ದ ಬಸ್, ರಸ್ತೆಯಲ್ಲಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ತಂಗುದಾಣಕ್ಕೆ ನುಗ್ಗಿ ಅವಘಡ ಸಂಭವಿಸಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ. ಈ ಸಂಬಂಧ ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.