ಶನಿವಾರ, ಜೂನ್ 19, 2021
21 °C

ಬಸ್ ಡಿಕ್ಕಿ: ಬೈಕ್‌ ಸವಾರ ಸಾವು

ಪ್ರಜಾವಾಣಿ ವಾರ್ತ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಮ್ಮನಹಳ್ಳಿ ಜಂಕ್ಷನ್‌ನಲ್ಲಿ ಗುರುವಾರ ಸಂಜೆ 5 ಗಂಟೆ ಸುಮಾರಿಗೆ ನಡೆದಿದೆ.

ಉಲ್ಲಾಳು ನಿವಾಸಿ ಶಿವಕುಮಾರ್ (45) ಮೃತರು. ಘಟನೆ ಸಂಬಂಧ ಬಿಎಂಟಿಸಿ ಚಾಲಕ ರಾಜೇಂದ್ರ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಶಿವಕುಮಾರ್ ಅವರು ಜಲಮಂಡಳಿ ಗುತ್ತಿಗೆದಾರರಾಗಿದ್ದಾರೆ. ದ್ವಿಚಕ್ರ ವಾಹನದಲ್ಲಿ ಮಾಳಗಾಳದ ಸರ್ವೀಸ್ ರಸ್ತೆ ಮಾರ್ಗವಾಗಿ ಬಂದಿದ್ದ ರಾಜೇಂದ್ರ ಅವರು ಸ್ನೇಹಿತರೊಬ್ಬರಿಗೆ ಸುಮ್ಮನಹಳ್ಳಿ ಜಂಕ್ಷನ್ ಕಡೆ ಬಳಿ ಕಾಯುತ್ತಾ ನಿಂತಿದ್ದರು. ಈ ವೇಳೆ ವೇಗವಾಗಿ ಬಂದ ಬನಶಂಕರಿಯಿಂದ ಯಶವಂತಪುರ ಕಡೆ ಹೋಗುವ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಕಾಮಾಕ್ಷಿಪಾಳ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು