ಬಸ್‌ಪಾಸ್‌: ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಲು ವ್ಯವಸ್ಥೆ

7

ಬಸ್‌ಪಾಸ್‌: ಆನ್‌ಲೈನ್‌ನಲ್ಲಿಯೇ ಅರ್ಜಿ ಸಲ್ಲಿಸಲು ವ್ಯವಸ್ಥೆ

Published:
Updated:

ಬೆಂಗಳೂರು: ಬಸ್‌ಪಾಸ್‌ ಪಡೆಯಲು ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿನಲ್ಲಿಯೇ SATS/PU online portal/E-Form ನಲ್ಲಿ ಪಾಸಿಗಾಗಿ ಅರ್ಜಿ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತಿಳಿಸಿದೆ. 

ಈ ವ್ಯವಸ್ಥೆಯಲ್ಲಿ ಪಾಸುಗಳನ್ನು ವಿತರಿಸಲು ಕಾಲಾವಕಾಶ ಬೇಕಾಗಿದೆ. ಆದ್ದರಿಂದ 2017-18ನೇ ಸಾಲಿನ ಪಾಸ್‌ಗಳಿಗೆ ಮಾನ್ಯತೆ ಇದೆ.

ಈ ಸಾಲಿನಲ್ಲಿ ಪಾಸುಗಳನ್ನು ಪಡೆದಿರುವ ವಿದ್ಯಾರ್ಥಿಗಳು, ಪಾಸುಗಳನ್ನು ಪಡೆದು ಕಳೆದುಕೊಂಡ ಹಾಗೂ ಪ್ರಸಕ್ತ ವರ್ಷದಲ್ಲಿ ಹೊಸದಾಗಿ ಪಾಸ್‌ ಪಡೆಯಬೇಕಾಗಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಶಾಲಾ/ಕಾಲೇಜಿಗೆ ದಾಖಲಾಗಿರುವ ರಸೀದಿ ಶುಲ್ಕ ಅಥವಾ ಗುರುತಿನ ಚೀಟಿ ತೋರಿಸಿ ಇದೇ 31ರವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ
ತಿಳಿಸಿದೆ.  

Tags: 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !