ಮಂಗಳವಾರ, ಡಿಸೆಂಬರ್ 1, 2020
17 °C

ರಸ್ತೆಯಲ್ಲಿ ಮಕ್ಕಳಿಂದ ವ್ಯಾಪಾರ: ವರದಿ ಕೇಳಿದ ಹೈಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜಧಾನಿಯ ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಹೂವು, ಆಟಿಕೆ ಮತ್ತಿತರ ವಸ್ತುಗಳನ್ನು ಮಾರಾಟ ಮಾಡುವ ಮಕ್ಕಳ ಕುರಿತು ಸಮೀಕ್ಷೆ ನಡೆಸಿ, ಸಮಗ್ರ ವಿವರಗಳೊಂದಿಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್‌ ಬುಧವಾರ ನಿರ್ದೇಶನ ನೀಡಿದೆ.

ಮಕ್ಕಳನ್ನು ಬಲವಂತದಿಂದ ಬೆಂಗಳೂರಿನ ಟ್ರಾಫಿಕ್‌ ಸಿಗ್ನಲ್‌ಗಳ ಬಳಿ ವ್ಯಾಪಾರಕ್ಕೆ ಕಳುಹಿಸಲಾಗುತ್ತಿದೆ ಎಂದು ದೂರಿ ಲೆಟ್ಜ್‌ಕಿಟ್‌ ಫೌಂಡೇಷನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ನೇತೃತ್ವದ ಪೀಠದಲ್ಲಿ ನಡೆಯಿತು. ವಿಸ್ತೃತ ವರದಿ ಕೇಳಿದ ನ್ಯಾಯಪೀಠ, ಸರ್ಕಾರ ನೀಡುವ ವರದಿಯನ್ನು ಪರಿಶೀಲಿಸಿದ ಬಳಿಕ ಬಾಲ ನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಸೂಕ್ತ ಆದೇಶ ನೀಡುವುದಾಗಿ ತಿಳಿಸಿತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು