ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ನ (ಬಿಐಎಎಲ್) ಅಂಗ ಸಂಸ್ಥೆ ಬೆಂಗಳೂರು ಏರ್ಪೋರ್ಟ್ ಸಿಟಿ ಲಿಮಿಟೆಡ್ (ಬಿಎಸಿಎಲ್) ‘ಬಿಸಿನೆಸ್ ಪಾರ್ಕ್’ ಆರಂಭಿಸಲು 20 ಲಕ್ಷ ಚದರ ಅಡಿ ಪ್ರದೇಶವನ್ನು ತನ್ನದಾಗಿಸಿಕೊಂಡಿದೆ.

‘ಈ ಪಾರ್ಕ್ ನಿರ್ಮಾಣದಿಂದ 3.5 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಆರ್ಥಿಕತೆಗೆ 50 ಶತಕೋಟಿ ಡಾಲರ್ ಕೊಡುಗೆಯನ್ನು ಪಾರ್ಕ್ ನೀಡಲಿದೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ಬೆಂಗಳೂರು ವಿಮಾನ ನಿಲ್ದಾಣ ನಗರವನ್ನು ವಿಶ್ವದರ್ಜೆಯ ತಾಣವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ವಿಮಾನ ನಿಲ್ದಾಣ ನಗರದಲ್ಲಿ ವಾಣಿಜ್ಯ ಕೇಂದ್ರಗಳು, ಉದ್ಯಾನವನ, ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ, ಮನೋರಂಜನಾ ಹಾಗೂ ಆತಿಥ್ಯ ತಾಣಗಳು ತಲೆಯೆತ್ತಲಿವೆ’ ಎಂದು ಸಂಸ್ಥೆ ತಿಳಿಸಿದೆ.

ಬಿಎಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ ರಾವ್ ಮುನುಕುಟ್ಲ, ‘ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಧಾರಿತ ಮೂಲಸೌಕರ್ಯ ಹಾಗೂ ಉನ್ನತ ದರ್ಜೆಯ ಸೌಕರ್ಯಗಳನ್ನು ಹೊಂದಿರಲಿದೆ. ವಿಮಾನ ನಿಲ್ದಾಣ ನಗರದ ಒಟ್ಟಾರೆ ಅಭಿವೃದ್ಧಿಯ ಶೇಕಡ 52 ರಷ್ಟು ಭಾಗವು ವ್ಯಾಪಾರ, ಉದ್ಯಾನವನಗಳ ಜಾಲವನ್ನು ಹೊಂದಲಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.