ಗುರುವಾರ , ಮೇ 19, 2022
23 °C

‘ತುಂಗಾನಗರದಲ್ಲಿ ಶೀಘ್ರವೇ ರಸ್ತೆ ಮರು ನಿರ್ಮಾಣ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತುಂಗಾನಗರದಲ್ಲಿ ಕೊಳವೆ ಅಳವಡಿಸುವ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ ಡಾಂಬರ್ ರಸ್ತೆ ಮರು ನಿರ್ಮಾಣ ಮಾಡಲಾಗುವುದು ಎಂದು ಜಲ ಮಂಡಳಿ ಸ್ಪಷ್ಟಪಡಿಸಿದೆ.

‘ಪ್ರಜಾವಾಣಿ’ಯಲ್ಲಿ ಶುಕ್ರವಾರ ಪ್ರಕಟವಾದ ‘ಕಾವೇರಿಯಿಂದ ತುಂಗಾನಗರದ ನೆಮ್ಮದಿ ಭಂಗ’ ಎಂಬ ವರದಿಗೆ ಪ್ರತಿಕ್ರಿಯೆ ನೀಡಿರುವ ಜಲ ಮಂಡಳಿ, ‘ಕಾವೇರಿ 5ನೇ ಹಂತದ ಯೋಜನೆಯಡಿ ಪೈಪ್‌ಲೈನ್ ಅಳವಡಿಕೆ ಮಾಡಲಾಗುತ್ತಿದೆ. ತುಂಗಾನಗರ ಮುಖ್ಯರಸ್ತೆಯಲ್ಲಿ ಕಾಮಗಾರಿಯು ತ್ವರಿತಗತಿಯಲ್ಲಿ ಪ್ರಗತಿ ಹಂತದಲ್ಲಿದ್ದು, ಸಮಾನಾಂತರವಾಗಿ ರಸ್ತೆ ಮರು ನಿರ್ಮಾಣ ಕಾಮಗಾರಿ ಸಹ ಕೈಗೊಳ್ಳಲಾಗುತ್ತಿದೆ. ದೂಳು ತುಂಬಿಕೊಳ್ಳುತ್ತಿರುವುದನ್ನು ತಡೆಯಲು ನಿರಂತರವಾಗಿ ನೀರು ಸಿಂಪರಣೆ ಮಾಡಲಾಗುತ್ತಿದೆ’ ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.