ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಮಂಡಳಿ: ನಾಳೆ ಫೋನ್‌–ಇನ್‌ ಕಾರ್ಯಕ್ರಮ

Last Updated 1 ಸೆಪ್ಟೆಂಬರ್ 2022, 21:27 IST
ಅಕ್ಷರ ಗಾತ್ರ

ಬೆಂಗಳೂರು: ಜಲಮಂಡಳಿ ವತಿಯಿಂದ ಇದೇ 3ರಂದು ಬೆಳಿಗ್ಗೆ 9ರಿಂದ 10.30ರ ವರೆಗೆ ನೇರ್‌ ಫೋನ್‌–ಇನ್‌ ಕಾರ್ಯಕ್ರಮ ಆಯೋಜಿಸಲಾಗಿದೆ.

ಜಲಮಂಡಳಿಯ ಅಧ್ಯಕ್ಷ ಎನ್‌. ಜಯರಾಮ್‌ ಅವರು ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸಾರ್ವಜನಿಕರು ತಮ್ಮ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್‌ ಸಮಸ್ಯೆ ಬಗ್ಗೆ ನೇರವಾಗಿ ಮಾತನಾಡಿ ಕುಂದು–ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್‌.ಆರ್‌. ಸಂಖ್ಯೆ ತಿಳಿಸಿ ದೂರು ನೀಡಬೇಕು ಎಂದು ಕೋರಿದ್ದಾರೆ.
ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 080–22945119

ಸಂಘಕ್ಕೆ ಆಯ್ಕೆ
ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯ ನೌಕರರ ಸಾಲ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಚ್‌. ಕೃಷ್ಣಪ್ಪ ಅವರು ಆಯ್ಕೆಯಾಗಿದ್ದಾರೆ.

ಸಂಘದ ಚುನಾವಣೆಯಲ್ಲಿ ಕಾರ್ಯಕಾರಿ ಮಂಡಳಿ ಸದಸ್ಯರಾದ ಎಚ್‌. ಕೃಷ್ಣಪ್ಪ ಅವರು ಬಹುಮತದಿಂದ ಆಯ್ಕೆಯಾಗಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT