ಬೆಂಗಳೂರು: ಜಲಮಂಡಳಿ ಅಧ್ಯಕ್ಷ ವಿ.ರಾಮ್‌ಪ್ರಸಾತ್ ಮನೋಹರ್ ಅವರು ಶುಕ್ರವಾರ (ಆಗಸ್ಟ್ 9) ಬೆಳಿಗ್ಗೆ 9.30ರಿಂದ 10.30ರವರೆಗೆ ಫೋನ್-ಇನ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.
ಸಾರ್ವಜನಿಕರು ವಲಯ/ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ, ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್‌ಗೆ ಸಂಬಂಧಿಸಿದ ಸಮಸ್ಯೆಯ ಬಗ್ಗೆ ಮಾತನಾಡಿ ಪರಿಹಾರ ಪಡೆದುಕೊಳ್ಳಬಹುದು.
ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್. ಸಂಖ್ಯೆಯನ್ನು ತಿಳಿಸಿ ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ದೂರವಾಣಿ ಸಂಖ್ಯೆ– 080-22945119 ಮತ್ತು 080-22229639.