ಬೆಂಗಳೂರು: ನಗರದ ಕೆಲವು ಭಾಗಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಕಾವೇರಿ 6ನೇ ಹಂತದ ನೀರು ಸರಬರಾಜು ಯೋಜನೆಗೆ ಜಲಮಂಡಳಿ ತಯಾರಿ ಆರಂಭಿಸಿದೆ.

₹6,939 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳುತ್ತಿರುವ ಈ ಯೋಜನೆಗೆ ಸಾಲ ನೀಡಲಿರುವ ಜಪಾನ್ ಅಂತರರಾಷ್ಟ್ರೀಯ ಸಹಕಾರ ಸಂಸ್ಥೆಯ(ಜೈಕಾ) ಅಧಿಕಾರಿಗಳ ತಂಡ ಬುಧವಾರ ಜಲಮಂಡಳಿಯಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿತು. ನಂತರ ಯೋಜನೆ ಜಾರಿಯಾಗಲಿರುವ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಿತು.

ಮಂಡಳಿ ಅಧ್ಯಕ್ಷ ಡಾ.ರಾಮಪ್ರಸಾತ್ ಮನೋಹರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯೋಜನೆಯ ಸ್ವರೂಪ, ಮಾರ್ಗ, ಭೂಸ್ವಾಧೀನ ಪ್ರಕ್ರಿಯೆ ಕುರಿತು ಮಾಹಿತಿ ವಿನಿಮಯ ಮಾಡಿಕೊಳ್ಳಲಾಯಿತು.

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಸಮೀಪದ ಕಟ್ಟೇರಿ ಗ್ರಾಮದ ನೀರು ಸಂಸ್ಕರಣಾ ಘಟಕದಲ್ಲಿ ಶೇಖರಣಾ ಅಣೆಕಟ್ಟೆ ನಿರ್ಮಿಸಿ ಅಲ್ಲಿಂದ ನೀರನ್ನು ಪಂಪ್ ಮಾಡಲಾಗುತ್ತದೆ. ಕಟ್ಟೇರಿಯಿಂದ 82 ಕಿ.ಮೀ. ದೂರದ ರಾಮನಗರ ಸಮೀಪದ ದೇವರಹೊಸಹಳ್ಳಿಯಲ್ಲಿ ಶೇಖರಣಾ ಜಲಾಶಯ ನಿರ್ಮಿಸಲಾಗುತ್ತದೆ. ಪಂಪಿಂಗ್ ಮೂಲಕ ಕೆಂಗೇರಿ ಸಮೀಪದ ನೈಸ್ ರಸ್ತೆ ಜಂಕ್ಷನ್ನಲ್ಲಿ 3ನೇ ಶೇಖರಣಾ ಜಲಾಶಯ ನಿರ್ಮಿಸಿ ಅಲ್ಲಿ ನೀರನ್ನು ಸಂಗ್ರಹಿಸಲಾಗುತ್ತದೆ.

ಜಿಕೆವಿಕೆಯಲ್ಲಿ ನಿರ್ಮಿಸುವ ಶೇಖರಣಾ ಜಲಾಶಯಕ್ಕೆ ನೀರು ಪೂರೈಕೆ ಮಾಡಿ ಅಲ್ಲಿಂದ ನೀರು ನಿಗದಿತ ಪ್ರದೇಶಗಳಿಗೆ ಹರಿಸುವ ಯೋಜನೆ ರೂಪಿಸಲಾಗಿದೆ.

ಭೂಸ್ವಾಧೀನ ಹೇಗೆ:

ಸುಮಾರು 120 ಕಿ.ಮೀ. ದೂರದವರೆಗೂ ಪೈಪ್ಲೈನ್ ಅಳವಡಿಸಲಾಗುತ್ತಿದ್ದು, ಇದಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತದೆ. ಯೋಜನಾ ವೆಚ್ಚವಾಗಿ ₹5,177 ಕೋಟಿ, ಪೈಪ್ಲೈನ್ ಮಾರ್ಗದಲ್ಲಿ 130 ಎಕರೆ ಭೂ ಸ್ವಾಧೀನಕ್ಕೆ ₹1,822 ಕೋಟಿ ಬೇಕಾಗಲಿದೆ. ಈ ಕುರಿತು ಹೆಚ್ಚಿನ ವಿವರವನ್ನು ತಂಡ ಪಡೆದುಕೊಂಡಿತು.

‘6 ಟಿಎಂಸಿ ಅಡಿ ನೀರಿನ ಪೈಕಿ(500 ಎಂಎಲ್ಡಿ) 4 ಟಿಎಂಸಿ ಅಡಿ ನೀರನ್ನು ಬೆಂಗಳೂರು ನಗರದ ನಾಡಪ್ರಭು ಕೆಂಪೇಗೌಡ ಬಡಾವಣೆ, ಶಿವರಾಮ ಕಾರಂತ ಬಡಾವಣೆ ಸಹಿತ ಹಲವು ಬಡಾವಣೆಗಳು, 2 ಟಿಎಂಸಿ ಅಡಿ ನೀರನ್ನು ಬೆಂಗಳೂರಿನ ಉಪನಗರಗಳಾದ ಚಿಕ್ಕಬಾಣಾವರ, ನೆಲಮಂಗಲ, ಹೊಸಕೋಟೆ, ದೇವನಹಳ್ಳಿ, ಬಾಶೆಟ್ಟಿಹಳ್ಳಿ, ವಿಜಯಪುರಕ್ಕೆ ಹಂಚಿಕೆ ಮಾಡಲಾಗುತ್ತದೆ. ಭೂಸ್ವಾಧೀನ ಪ್ರಕ್ರಿಯೆಯನ್ನು ಹಂತ ಹಂತವಾಗಿ ಆರಂಭಿಸಲಾಗುತ್ತದೆ’ ಎಂದು ಅಧಿಕಾರಿಗಳು ವಿವರಿಸಿದರು.

ಕಾವೇರಿ 6ನೇ ಹಂತದ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು. ಇದಕ್ಕೆ ಸಂಬಂಧಿಸಿ ಸಿದ್ದತೆ ಶುರುವಾಗಿದೆ. ಬೆಂಗಳೂರು ನಗರದ ಭವಿಷ್ಯದ ಕುಡಿಯುವ ನೀರಿನ ಬೇಡಿಕೆಗೆ ಅನುಗುಣವಾಗಿ ಯೋಜನೆ ರೂಪಿಸಲಾಗುತ್ತಿದೆ
. ಡಾ.ರಾಮಪ್ರಸಾತ್ ಮನೋಹರ್ ಅಧ್ಯಕ್ಷ ಜಲಮಂಡಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.