ಶನಿವಾರ, ಜುಲೈ 31, 2021
27 °C

‘ಜಲಮಂಡಳಿ ಸಿಬ್ಬಂದಿಗೆ ವಿಮೆ ನೀಡಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಲಮಂಡಳಿಯ ಕಾಯಂ ಹಾಗೂ ಹೊರಗುತ್ತಿಗೆ ನೌಕರರು, ಅಧಿಕಾರಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಕೊರೊನಾ ಸೋಂಕು ತಗುಲಿದರೆ ಆಸ್ಪತ್ರೆ ವೆಚ್ಚವನ್ನು ಜಲಮಂಡಳಿಯೇ ಭರಿಸಿ, ಅವರಿಗೆ ವಿಮೆ ನೀಡಬೇಕು ಎಂದು ಜಲಮಂಡಳಿ ನೌಕರರ ಸಂಘ ಸರ್ಕಾರಕ್ಕೆ ಮನವಿ ಮಾಡಿದೆ.

ಸಂಘದ ಅಧ್ಯಕ್ಷ ರುದ್ರೇಗೌಡ ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದು, ‘ಜಲಮಂಡಳಿಯ ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್, ಜಲಪರಿವೀಕ್ಷಕರು, ಮಾಪಕ ಓದುಗರು, ಒಳಚರಂಡಿ ಕೆಲಸಗಾರರು ಸೇರಿ ಎಲ್ಲ ಸಿಬ್ಬಂದಿ ಹೊರಗೆ ಓಡಾಡಿ ಕೆಲಸ ಮಾಡಬೇಕಾದ ಅನಿವಾರ್ಯ ಇದೆ. ಇವರಿಗೆ ಸೋಂಕು ತಗಲುವ ಸಾಧ್ಯತೆ ಹೆಚ್ಚು. ಕೋವಿಡ್-19 ವಿಮೆಯನ್ನು ಮಂಡಳಿಯ ನೌಕರರಿಗೂ ಅನ್ವಯಿಸಬೇಕು’ ಎಂದು ಕೋರಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು