ಶನಿವಾರ, ಏಪ್ರಿಲ್ 1, 2023
23 °C

ಅನುಕಂಪದ ಮಾತುಗಳಿಂದ ಬೆಂಕಿ ಹಚ್ಚುವ ಯತ್ನ: ವಿಜಯೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ‘ಬಿ.ಎಸ್‌.ಯಡಿಯೂರಪ್ಪ ಅವರ ಬಗ್ಗೆ ಅನುಕಂಪದ ಮಾತುಗಳ ನ್ನಾಡುವ ಮೂಲಕ ನಮ್ಮ ಪಕ್ಷದಲ್ಲಿ ಬೆಂಕಿ ಹಚ್ಚಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಅವುಗಳಿಗೆ ಆಸ್ಪದ ನೀಡುವ ಪ್ರಶ್ನೆಯೇ ಇಲ್ಲ’ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ‘ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಕನಿಷ್ಠ 140 ರಿಂದ 150 ಶಾಸಕರನ್ನು ಗೆಲ್ಲಿಸುವುದೇ ನಮ್ಮೆಲ್ಲ ಗುರಿಯಾಗಿದೆ’ ಎಂದು ಹೇಳಿದರು. ‘ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಾಗ ವೀರಶೈವ ಸಮಾಜದ ಕುರಿತು ಯಾರ್‍ಯಾರು ಯಾವ ರೀತಿ ನಡೆದುಕೊಂಡಿದ್ದಾರೆ ಎಂಬುದು ಗೊತ್ತಿದೆ. ಆದ್ದರಿಂದ ಸಿದ್ದರಾಮಯ್ಯ ಅವರ ಹೇಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ’ ಎಂದರು.

ಕುಮಾರಸ್ವಾಮಿಯವರು ದಿವಾಳಿಯಾಗಿದ್ದಾರೆ. ಜನರ ಮನಸ್ಸನ್ನು ತಮ್ಮ ಕಡೆ ಸೆಳೆಯಲು ಅವರ ಬಳಿ ಅಸ್ತ್ರಗಳಿಲ್ಲ. ಅದಕ್ಕಾಗಿ ಹೀಗೆ
ಮಾತನಾಡುತ್ತಿದ್ದಾರೆ. ಅವುಗಳಿಗೆ ರಾಜ್ಯದ ಜನರು ಅವಕಾಶ ಮಾಡಿಕೊಡುವುದಿಲ್ಲ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು