ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹4.40 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

Last Updated 26 ಜುಲೈ 2019, 19:48 IST
ಅಕ್ಷರ ಗಾತ್ರ

ಯಲಹಂಕ: ರಾಜ್ಯ ಸರ್ಕಾರದ ವಿಶೇಷ ಅನುದಾನದಡಿಯಲ್ಲಿ ಬ್ಯಾಟರಾಯನಪುರ ಕ್ಷೇತ್ರದ ಬಾಗಲೂರು ಮತ್ತು ಕೋಗಿಲು ಬಡಾವಣೆಯಲ್ಲಿ ₹4.40 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೃಷ್ಣಬೈರೇಗೌಡ ಚಾಲನೆ ನೀಡಿದರು.

ಬಾಗಲೂರು ಗ್ರಾಮದಿಂದ ಸಾತನೂರು ಮುಖಾಂತರ ಯಲಹಂಕ ಕಡೆಗೆ ಸಂಪರ್ಕ ಕಲ್ಪಿಸುವ 1.5 ಕಿಲೋಮೀಟರ್ ರಸ್ತೆಯನ್ನು ₹2.50 ಕೋಟಿ ವೆಚ್ಚದಲ್ಲಿ ಹಾಗೂ ಯಲಹಂಕದಿಂದ ಕೋಗಿಲು ಮುಖಾಂತರ ಬೆಳ್ಳಳ್ಳಿ ಕ್ರಾಸ್‌ ವರೆಗಿನ 2.3 ಕಿಲೋಮೀಟರ್ ರಸ್ತೆಯನ್ನು ₹1.90 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿ ಇದಾಗಿದೆ.

ಈ ವೇಳೆ ಮಾತನಾಡಿದ ಕೃಷ್ಣಬೈರೇಗೌಡ, ‘ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಪರ್ಯಾಯ ರಸ್ತೆ ನಿರ್ಮಿಸಿದ ನಂತರ ಪ್ರತಿನಿತ್ಯ ಸಾವಿರಾರು ವಾಹನಗಳು ಬಾಗಲೂರು ಮುಖಾಂತರ ಸಂಚರಿಸುತ್ತಿವೆ. ಇದರಿಂದಾಗಿ, ಈ ಭಾಗದ ರಸ್ತೆಗಳಲ್ಲಿ ಹೆಚ್ಚಿನ ಸಂಚಾರದಟ್ಟಣೆ ಉಂಟಾಗುತ್ತಿದೆ. ಇದರಿಂದ ಸ್ಥಳೀಯ ಜನರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸುವುದರ ಜೊತೆಗೆ ಸಂಚಾರದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕಾದ ಅಗತ್ಯವಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT