ಬುಧವಾರ, ಜನವರಿ 27, 2021
18 °C

ಸ್ವ–ಉದ್ಯಮ: ಸಮಾಜ ಕಲ್ಯಾಣ ಇಲಾಖೆ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ‘ಆರ್ಥಿಕವಾಗಿ ಹಿಂದುಳಿದ ಜನಾಂಗಗಳ ಯುವಕ– ಯುವತಿಯರು ಸ್ವಯಂ ಉದ್ಯಮ ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆ ನೆರವಾಗುತ್ತದೆ’ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು.

ಕೆ.ಆರ್.ಪುರ ಸಮೀಪದ ಆನಂದಪುರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ನೆರವಿನಿಂದ ಆರಂಭಿಸಲಾದ ‘ತಾಮರ’ ನೂತನ ಮಳಿಗೆ ಉದ್ಘಾಟಿಸಿ ಅವರು ಮಾತನಾಡಿದರು.

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ನಿಗಮವು ಉದ್ಯಮಶೀಲತೆ ಮತ್ತು ಕೌಶಲ ತರಬೇತಿ ನೀಡುತ್ತಾ ಬಂದಿದೆ. ಅರ್ಹ ಫಲಾನುಭವಿಗಳು ಸಮಾಜ ಕಲ್ಯಾಣ ಇಲಾಖೆಯ ಯೋಜನೆಗಳಿಗೆ ಅರ್ಜಿ ಸಲ್ಲಿಸಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬಹುದು’ ಎಂದು ಹೇಳಿದರು.

ನಿಗಮದ ಅಧ್ಯಕ್ಷ ಸಿ.ಮುನಿಕೃಷ್ಣ, ‘ಸಮಾಜ ಕಲ್ಯಾಣ ಇಲಾಖೆಯು ಸಮೃದ್ಧಿ ಯೋಜನೆಯಡಿ ₹220 ಕೋಟಿ ವೆಚ್ಚದಲ್ಲಿ  40ಕ್ಕೂ ಹೆಚ್ಚು ಫ್ರಾಂಚೈಸಿಗಳ ಸಹಯೋಗದಲ್ಲಿ ಮಳಿಗೆಗಳನ್ನು ಆರಂಭಿಸಲಾಗಿದೆ. 300ಕ್ಕೂ ಹೆಚ್ಚು ಚಿಲ್ಲರೆ ಮಾರಾಟ ಮಳಿಗೆಗಳನ್ನು ಆರಂಭಿಸಲಾಗಿದೆ. 2021ರ ವೇಳೆಗೆ ಎರಡು ಸಾವಿರ ಮಳಿಗೆಗಳನ್ನು ತೆರೆಯುವ ಗುರಿ ಇದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು