ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ನಿಯಮಿತ (ರೆಗ್ಯುಲರ್) ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಬೈರತಿ ಬಸವರಾಜ ಅವರು ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಗುರುವಾರ ಪುರಸ್ಕರಿಸಿ ಆದೇಶಿಸಿದರು.

ಷರತ್ತುಗಳು: ‘ಅರ್ಜಿದಾರರು ₹2 ಲಕ್ಷ ಮೊತ್ತದ ಬಾಂಡ್ ಮತ್ತು ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಅವರ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡಕೂಡದು. ಪ್ರಕರಣದ ತನಿಖಾಧಿಕಾರಿ ಕರೆದಾಗಲೆಲ್ಲಾ ಹೋಗಬೇಕು ಮತ್ತು ತನಿಖೆಗೆ ಸಹಕರಿಸಬೇಕು. ಅನಗತ್ಯ ಮುದ್ದತುಗಳನ್ನು ಬೇಡದೆ ವಿಚಾರಣಾ ಕೋರ್ಟ್ಗೆ ನಿಯಮಿತವಾಗಿ ಹಾಜರಾಗಬೇಕು. ಯಾವುದೇ ಎರಡನೇ ಭಾನುವಾರದಂದು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆ ಒಳಗೆ ತನಿಖಾಧಿಕಾರಿ ಮುಂದೆ ಮೂರು ತಿಂಗಳು ಹಾಜರಾಗಬೇಕು. ನ್ಯಾಯಾಲಯದಿಂದ ಅಗತ್ಯ ಅನುಮತಿ ಪಡೆಯದೆ ವಿದೇಶಕ್ಕೆ ತೆರಳುವುದಿಲ್ಲ ಎಂಬ ಪ್ರಮಾಣಪತ್ರವನ್ನು ಕಾಯಂ ವಿಳಾಸ, ಮೊಬೈಲ್ ನಂಬರ್, ಇ–ಮೇಲ್ ವಿಳಾಸ, ಪಾಸ್ಪೋರ್ಟ್ ನಂಬರ್ ಇರುವ ಮುಚ್ಚಳಿಕೆ ರೂಪದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು’ ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.

ಪ್ರಕರಣವೇನು?: ಮಿನಿ ಅವೆನ್ಯೂ ರಸ್ತೆಯಲ್ಲಿರುವ ಸೇಫ್ ಮೆಡಿಕಲ್ ಸ್ಟೋರ್ ಮುಂಭಾಗ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವುನನ್ನು 2025ರ ಜುಲೈ 15ರಂದು 8ರಿಂದ 9 ಜನರಿದ್ದ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿತ್ತು. ಈ ಸಂಬಂಧ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದಲ್ಲಿ ಬೈರತಿ ಬಸವರಾಜ ಐದನೇ ಆರೋಪಿಯಾಗಿದ್ದಾರೆ.

ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 103 ಮತ್ತು 190ರ ಅಡಿಯಲ್ಲಿ ದೂರು ದಾಖಲು ಮಾಡಿಕೊಳ್ಳಲಾಗಿದೆ. ಈ ಪ್ರಕರಣವನ್ನು ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.