ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಅವರ ಕೊಲೆ ಪ್ರಕರಣದ ಆರೋಪಿ ಶಾಸಕ ಬೈರತಿ ಬಸವರಾಜು ಅವರನ್ನು ಏಳು ದಿನ ಸಿಐಡಿ ವಶಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶಿಸಿದ್ದಾರೆ.

ಹೃದಯ ಸಂಬಂಧಿ ಸಮಸ್ಯೆ ಕಾರಣ ನ್ಯಾಯಾಲಯದ ಸೂಚನೆ ಮೇರೆಗೆ ಎರಡು ದಿನಗಳಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೈರತಿ ಬಸವರಾಜ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹೀಗಾಗಿ ಭಾನುವಾರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

ನಂತರ ಸಿಐಡಿ ಪೊಲೀಸರು, ಬಸವರಾಜು ಅವರನ್ನು 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಅವರ ನಿವಾಸದಲ್ಲಿ ಹಾಜರುಪಡಿಸಿದರು. 9 ಪ್ರಮುಖ ಕಾರಣಗಳನ್ನು ಉಲ್ಲೇಖಿಸಿ, ಹೆಚ್ಚಿನ ವಿಚಾರಣೆ ಸಂಬಂಧ ಆರೋಪಿಯನ್ನು 9 ದಿನ ವಶಕ್ಕೆ ನೀಡುವಂತೆ ಮನವಿ ಮಾಡಿದರು. ವಿಚಾರಣೆ ಮಾಡಿದ ನ್ಯಾಯಾಧೀಶರು, ಫೆಬ್ರುವರಿ 21ರವರೆಗೆ ಸಿಐಡಿ ವಶಕ್ಕೆ ನೀಡಿ ಆದೇಶಿಸಿದರು.

ಮನೆ ಊಟಕ್ಕೆ ಅರ್ಜಿ: ಇದೇ ವೇಳೆ ಆರೋಪಿ ಪರ ವಕೀಲರು, ವಿಚಾರಣೆ ವೇಳೆ ತಮ್ಮ ಕಕ್ಷಿದಾರರಿಗೆ ಮನೆ ಊಟಕ್ಕೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದರು. ಅದಕ್ಕೆ ಸಿಐಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ್ ನಾಯಕ್ ಆಕ್ಷೇಪಿಸಿದ ಕಾರಣ, ಮನೆ ಊಟ ಸಂಬಂಧ ಪ್ರತ್ಯೇಕ ಅರ್ಜಿ ಸಲ್ಲಿಸುವಂತೆ ನ್ಯಾಯಾಧೀಶರು ಸೂಚಿಸಿದರು. ಸದ್ಯಕ್ಕೆ ವೈದ್ಯರು ನೀಡಿರುವ ಚಾರ್ಟ್ ಪ್ರಕಾರವೇ ಊಟ ನೀಡುವಂತೆ ಆದೇಶಿಸಿದರು. ನ್ಯಾಯಾಧೀಶರ ಸೂಚನೆ ಮೇರೆಗೆ ಅಲ್ಲಿಯೇ ಆರೋಪಿ ಪರ ವಕೀಲರು ಮನೆ ಊಟಕ್ಕೆ ಅರ್ಜಿ ಸಲ್ಲಿಸಿದರು. ಈ ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಯಲಿದೆ.

ಭೂ ವ್ಯಾಜ್ಯ ಸಂಬಂಧ ಬಿಕ್ಲು ಶಿವುಗೆ ಶಾಸಕ ಬಸವರಾಜ ಬೆದರಿಸಿದ್ದ ಆಡಿಯೊ ಸಿಐಡಿಗೆ ಸಿಕ್ಕಿದೆ. ಈ ದೂರವಾಣಿ ಕರೆಯನ್ನು ಶಿವು ರೆಕಾರ್ಡ್ ಮಾಡಿಟ್ಟಿದ್ದ. ಶಿವು ಮೊಬೈಲ್ನಲ್ಲಿ ಈ ರೆಕಾರ್ಡಿಂಗ್ ಪತ್ತೆಯಾಗಿದ್ದು, ಶಾಸಕರ ಧ್ವನಿಯನ್ನೇ ಹೋಲುತ್ತಿದೆ. ಈ ನಿಟ್ಟಿನಲ್ಲಿ ಆಡಿಯೊದಲ್ಲಿರುವ ಧ್ವನಿಯು ಬಸವರಾಜ ಅವರದ್ದೇ ಎಂಬುದನ್ನು ದೃಢಪಡಿಸಲು ಧ್ವನಿ ಮಾದರಿ ಪರೀಕ್ಷೆ ನಡೆಸಲು ತನಿಖಾ ತಂಡ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಫೆಬ್ರುವರಿ 12ರಂದು ಸಿಐಡಿ ಪೊಲೀಸರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೈರತಿ ಬಸವರಾಜ ಅವರನ್ನು ಬಂಧಿಸಿದ್ದರು. ಆರೋಗ್ಯ ತಪಾಸಣೆ ವೇಳೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಕಂಡು ಬಂದಿತ್ತು. ಹಾಗಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಆರೋಪಿಯನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ವೈದ್ಯರು ಆಂಜಿಯೋಗ್ರಾಮ್ ಮಾಡಿದ್ದರು. ಭಾನುವಾರ ಮತ್ತೊಮ್ಮೆ ತಪಾಸಣೆ ಮಾಡಿದಾಗ ಎಲ್ಲವೂ ಸಹಜ ಸ್ಥಿತಿಯಲ್ಲಿರುವುದು ಕಂಡು ಬಂದಿದೆ. ಸದ್ಯ ಅಧಿಕಾರಿಗಳು ಆರೋಪಿ ಬೈರತಿ ಬಸವರಾಜು ಅವರನ್ನು ಸಿಐಡಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ: 2025ರ ಜುಲೈ 15ರಂದು ಬಿಕ್ಲು ಶಿವು ಅವರ ಕೊಲೆ ನಡೆದಿತ್ತು. ಆ ಕೊಲೆ ಪ್ರಕರಣದಲ್ಲಿ ಬಸವರಾಜ ಅವರು ಐದನೇ ಆರೋಪಿ ಆಗಿದ್ದಾರೆ. ಶಿವು ಅವರ ತಾಯಿ ನೀಡಿದ ದೂರಿನ ಮೇರೆಗೆ ಸಿಐಡಿ ತನಿಖೆ ನಡೆಯುತ್ತಿದೆ. ಈ ಪ್ರಕರಣದಲ್ಲಿ 20 ಮಂದಿಯನ್ನು ಬಂಧಿಸಲಾಗಿದೆ.

ರಿಮ್ಯಾಂಡ್ ಅರ್ಜಿಯಲ್ಲಿ 9 ಕಾರಣ ಉಲ್ಲೇಖ

ಬೈರತಿ ಬಸವರಾಜ ಅವರನ್ನು ಕಸ್ಟಡಿಗೆ ಕೇಳುವ ಸಂದರ್ಭದಲ್ಲಿ 9 ಪ್ರಮುಖ ಕಾರಣಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿರುವ ರಿಮ್ಯಾಂಡ್ ಅರ್ಜಿಯಲ್ಲಿ ಸಿಐಡಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ.

ಈ ಹಿಂದೆ ಭಾರತೀನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದಾಗ ಆರೋಪಿ ಬೈರತಿ ಬಸವರಾಜ ಅವರು ಸತ್ಯಾಂಶಗಳನ್ನು ಮರೆಮಾಚಿದ್ದು ತನಿಖೆ ವೇಳೆ ದೊರೆತ ಸಾಕ್ಷ್ಯಾಧಾರಗಳ ಆಧಾರದ ಮೇಲೆ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ. ಹತ್ಯೆಗೂ ಮುನ್ನ ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕಾಗಿದೆ. ಬಸವರಾಜ ಅವರನ್ನು ಬಂಧಿಸಿದ ವೇಳೆ ಅವರು ಬಳಸುತ್ತಿದ್ದ ಮೊಬೈಲ್ಗಳು ಪತ್ತೆಯಾಗಿಲ್ಲ. ಅವುಗಳನ್ನು ವಶಕ್ಕೆ ಪಡೆದುಕೊಳ್ಳಬೇಕಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಸಾಕ್ಷಿದಾರರನ್ನು ವಿಚಾರಣೆಗೊಳಪಡಿಸಿ ಆರೋಪಿಯ ಹೇಳಿಕೆಗಳು ಸಮಂಜಸವಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಆರೋಪಿಯು ಘಟನೆಗೂ ಮುನ್ನ ಇತರೆ ಆರೋಪಿಗಳೊಂದಿಗೆ ಸೇರಿ ಪಿತೂರಿ ನಡೆಸಿದ ಸ್ಥಳಗಳನ್ನು ಗುರುತಿಸಬೇಕಾಗಿದೆ. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿರುವುದು ತಿಳಿದುಬಂದಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಬೇಕಿದೆ. ಇತರೆ ಆರೋಪಿಗಳಿಗೆ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಬೆಂಬಲ ನೀಡುತ್ತಿರುವ ಬಗ್ಗೆ ತನಿಖೆ ವೇಳೆ ತಿಳಿದು ಬಂದಿದೆ ಎಂದು ಹೇಳಿವೆ.

ಬಸವರಾಜ ನಿವಾಸಕ್ಕೆ ಬಿಜೆಪಿ ನಾಯಕರ ಭೇಟಿ

ಬೈರತಿ ಬಸವರಾಜ ನಿವಾಸಕ್ಕೆ ಬಿಜೆಪಿ ನಾಯಕರ ತಂಡ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಗೋವಿಂದ ಕಾರಜೋಳ, ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ, ವರ್ತೂರು ಪ್ರಕಾಶ್, ಬೆಂಗಳೂರು ಉತ್ತರ ಜಿಲ್ಲಾ ಘಟಕದ ಬಿಜೆಪಿ ಅಧ್ಯಕ್ಷ ಎಸ್.ಹರೀಶ್ ಒಳಗೊಂಡ ತಂಡ ಬೈರತಿ ಕುಟುಂಬ ಸದಸ್ಯರಿಗೆ ಧೈರ್ಯ ಹೇಳಿದೆ.

ವಿಜಯೇಂದ್ರ ಮಾತನಾಡಿ ‘ಯಡಿಯೂರಪ್ಪ ಅವರ ಬಗ್ಗೆ ಬಸವರಾಜ ಇಟ್ಟ ವಿಶ್ವಾಸಕ್ಕೆ ಬೆಲೆ ಕಟ್ಟಲು ಆಗಲ್ಲ. ಎಲ್ಲವೂ ಕೂಡ ನಮ್ಮ ಪರೀಕ್ಷೆಯ ಸಮಯ. ತಂದೆ ಹಾಗೂ ಕುಟುಂಬದ ಮೇಲೆ ಹಾಕಿದ್ದ 25-30 ಕೇಸ್ ಎದುರಿಸಿದ್ದೇನೆ. ರಾಜಕೀಯ ಷಡ್ಯಂತ್ರಗಳು ಹೇಗೆ ನಡೆಯುತ್ತವೆ ಎಂಬುದು ಗೊತ್ತಿದೆ. ಯಾರೂ ತಾಳ್ಮೆ ಕಳೆದುಕೊಳ್ಳಬಾರದು. ನಾನು ಯಡಿಯೂರಪ್ಪ ಪಕ್ಷ ಅವರ ಜೊತೆ ಇದ್ದೇ ಇರುತ್ತೇವೆ. ರಾಜಕೀಯವಾಗಿ ಯಾರೂ ಆತಂಕ ಪಡುವ ಅಗತ್ಯವಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.