ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಪ್ರತಿಭೆ ಅನಾವರಣಕ್ಕೆ ‘ಪ್ರತಿಭಾ ಕಾರಂಜಿ’ ಸೂಕ್ತ ವೇದಿಕೆ: ಬೈರತಿ ಬಸವರಾಜ

Published 10 ನವೆಂಬರ್ 2023, 15:26 IST
Last Updated 10 ನವೆಂಬರ್ 2023, 15:26 IST
ಅಕ್ಷರ ಗಾತ್ರ

ಕೆ.ಆರ್.ಪುರ: ವಿದ್ಯಾರ್ಥಿಗಳು ತಮ್ಮೊಳಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಸೂಕ್ತ ವೇದಿಕೆಯಾಗಿದೆ ಎಂದು ಶಾಸಕ ಬೈರತಿ ಬಸವರಾಜ ಅಭಿಪ್ರಾಯಪಟ್ಟರು.

ಕೆ.ಆರ್.ಪುರ ಸಮೀಪದ ಎಚ್ಎಎಲ್‌ನ ಕೈರಳಿ ನಿಲಯಂ ಸೆಂಟ್ರಲ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ದಕ್ಷಿಣ ವಲಯದಿಂದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ನಿಜವಾದ ಪ್ರತಿಭೆಗಳನ್ನು ಪ್ರಾಥಮಿಕ ಶಾಲೆಗಳಲ್ಲಿ ಗುರುತಿಸುವುದೇ ಪ್ರತಿಭಾಕಾರಂಜಿ. ಮಕ್ಕಳು ಕಲಿಯುವ ವಯಸ್ಸಿನಲ್ಲಿ ಉತ್ತಮ ವೇದಿಕೆಯನ್ನು ಒದಗಿಸಿಕೊಟ್ಟು, ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.

ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಮೂರ್ತಿ ಮಾತನಾಡಿ, ಈ ವ್ಯಾಪ್ತಿಯಲ್ಲಿರುವ ಇಪ್ಪತ್ತಕ್ಕೂ ಹೆಚ್ಚು ಶಾಲೆಗಳ ಸಾವಿರಕ್ಕೂ ಹೆಚ್ಚು ಮಕ್ಕಳು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದರು. ಈ ಸಂಧರ್ಭದಲ್ಲಿ ಶಿಕ್ಷಣ ಸಂಯೋಜಕ ಕೆ.ಕಾಂತರಾಜ, ಕೈರಳಿ ಕಲಾ ಸಮಿತಿಯ ಕಾರ್ಯದರ್ಶಿ ಪಿ.ಕೆ.ಸುಧೀಶ್, ಮುಖಂಡರಾದ ಮಾರ್ಕೆಟ್ ರಮೇಶ್, ಕೃಷ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT