ಗುರುವಾರ , ಜೂನ್ 30, 2022
27 °C

ಬೆಂಗಳೂರಿನ 37ನೇ ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ 37ನೇ ಪೊಲೀಸ್ ಕಮಿಷನರ್ ಆಗಿ ಸಿ.ಎಚ್. ಪ್ರತಾಪ್ ರೆಡ್ಡಿ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ನಿರ್ಗಮಿತ ಕಮಿಷನರ್ ಕಮಲ್‌ ಪಂತ್ ಅವರು ಬ್ಯಾಟನ್ ನೀಡುವ ಮೂಲಕ ನೂತನ ಕಮಿಷನರ್ ಪ್ರತಾಪ್‌ ರೆಡ್ಡಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

1991ರ ಐಪಿಎಸ್ ಬ್ಯಾಚ್ ಅಧಿಕಾರಿಯಾದ ಪ್ರತಾಪ್ ರೆಡ್ಡಿ, ಆಂಧ್ರಪ್ರದೇಶದ ಗುಂಟೂರಿನವರು. ಕೃಷಿ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಮುಗಿಸಿರುವ ಇವರು, ಸಾರ್ವಜನಿಕ ಯೋಜನೆ ಹಾಗೂ ನಿರ್ವಹಣೆ ವಿಷಯದಲ್ಲಿ ಸ್ನಾತಕ ಪದವಿ ಪೂರ್ಣಗೊಳಿಸಿದ್ದಾರೆ‌‌. 1991ರಲ್ಲಿ ಹಾಸನ ಜಿಲ್ಲೆಯ ಅರಸೀಕೆರೆಯ ಎಎಸ್ಪಿ ಆಗುವ ಮೂಲಕ ವೃತ್ತಿ ಆರಂಭಿಸಿದ್ದರು.

ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ರಾಜ್ಯ ಸರ್ಕಾರ ಅವಕಾಶ ನೀಡಿದ್ದಕ್ಕೆ ಧನ್ಯವಾದ. ಬೆಂಗಳೂರಿನ ಜನರ ರಕ್ಷಣೆಗೆ ಬದ್ಧನಾಗಿ ಕೆಲಸ ಮಾಡುತ್ತೇನೆ' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು