ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿ ಅವರು 2020ರಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್ಇಪಿ) ರೂಪಿಸಿ, ಅನುಮೋದಿಸಿದ್ದಾರೆ. ಆದರೆ ರಾಜಕೀಯ ದುರುದ್ದೇಶದಿಂದ ಎನ್ಇಪಿ ಅನುಷ್ಠಾನಕ್ಕೆ ಅಡ್ಡಗಾಲು ಹಾಕಲಾಗುತ್ತಿದೆ’ ಎಂದು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.

ಕರ್ನಾಟಕ ಆರ್ಯವೈಶ್ಯ ಮಹಾಸಭಾ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಡೀ ವಿಶ್ವದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ಅದಕ್ಕೆ ಪೂರಕವಾಗಿ ಎನ್ಇಪಿ ರೂಪಿಸಲಾಗಿದೆ. ಇದು ಸಮಗ್ರ ಶಿಕ್ಷಣ ನೀತಿಯನ್ನು ಒಳಗೊಂಡಿದೆ. ಇದನ್ನು ಅನುಷ್ಠಾನ ಮಾಡುವಲ್ಲಿ ತಡವಾಗಿದೆ. ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ’ ಎಂದರು.

‘21ನೇ ಶತಮಾನದಲ್ಲಿ ಆವಿಷ್ಕಾರ, ತಂತ್ರಜ್ಞಾನ ಹಾಗೂ ಉದ್ಯಮಶೀಲತೆಗೆ ಶಿಕ್ಷಣವೇ ಮಾನದಂಡವಾಗಿದೆ. ಆದ್ದರಿಂದ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಣ, ಕೈಗಾರಿಕೋದ್ಯಮಕ್ಕೆ ಹೆಚ್ಚು ಒತ್ತು ನೀಡಿದ್ದ ಮೈಸೂರು ಸಂಸ್ಥಾನ ಇಡೀ ದೇಶಕ್ಕೆ ಮಾದರಿ ಆಗಿತ್ತು. ಬನಾರಸ್ ಹಿಂದೂ ವಿಶ್ವವಿದ್ಯಾಲಯ ಹಾಗೂ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯನ್ನು (ಐಐಎಸ್ಸಿ) ಸ್ಥಾಪಿಸಿದ ಕೀರ್ತಿ ಮೈಸೂರು ಮಹಾರಾಜರಿಗೆ ಸಲ್ಲುತ್ತದೆ’ ಎಂದು ಹೇಳಿದರು.

ಮೈಸೂರು–ಕೊಡಗು ಸಂಸದ ಯದುವೀರ್ ದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ‘ಸಾಮಾಜಿಕ ಜಾಲತಾಣಗಳನ್ನು ವೈಯಕ್ತಿಕ ಹಾಗೂ ಸಮುದಾಯದ ಅಭಿವೃದ್ಧಿಗೆ ಪೂರಕವಾಗುವಂತೆ ಬಳಸಿಕೊಳ್ಳಬೇಕು. ಈ ಕ್ಷೇತ್ರದಲ್ಲಿ ಸಕ್ರಿಯರಾಗಿರುವವರನ್ನು ಗುರುತಿಸಿ, ಸನ್ಮಾನಿಸಿರುವುದು ಶ್ಲಾಘನೀಯ’ ಎಂದರು.

ಇದೇ ಸಂದರ್ಭದಲ್ಲಿ 1,413 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಡೆದ ಪ್ರತಿಭಾ ಶೋಭಾಯಾತ್ರೆಗೆ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಈ. ಸುಧೀಂದ್ರ ಚಾಲನೆ ನೀಡಿದರು. ಶಾಸಕ ಡಿ.ಎಸ್. ಅರುಣ್, ಸುಪ್ರೀಂ ಕೋರ್ಟ್ ವಕೀಲ ಕೆ.ಆರ್. ಪ್ರದೀಪ್, ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಅಧ್ಯಕ್ಷ ಆರ್.ಪಿ. ರವಿಶಂಕರ್ ಉಪಸ್ಥಿತರಿದ್ದರು.

‘ಭಾರತೀಯ ಧರ್ಮದಂತೆ ದೇಶದ ಅಭಿವೃದ್ಧಿಯಾಗಲಿ’

‘ನಮ್ಮ ದೇಶ ಶ್ರೇಷ್ಠ ಭಾರತವಾಗಬೇಕಾದರೆ ಅದು ಭಾರತೀಯ ಧರ್ಮದ ಆಧಾರದ ಮೇಲೆ ಅಭಿವೃದ್ಧಿ ಆಗಬೇಕು. ಆರೋಗ್ಯ ಶಿಕ್ಷಣ ಕೈಗಾರಿಕೋದ್ಯಮಕ್ಕೆ ಉತ್ತಮ ಪ್ರೋತ್ಸಾಹ ದೊರೆಯುತ್ತಿದೆ. ಈ ಎಲ್ಲ ಕ್ಷೇತ್ರಗಳನ್ನು ಭಾರತೀಯ ಧರ್ಮದ ಆಧಾರದ ಮೇಲೆ ಅಭಿವೃದ್ಧಿಪಡಿಸಬೇಕು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.