ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿಎಎ, ಎನ್‌ಆರ್‌ಸಿ ಸಂವಿಧಾನ ವಿರೋಧಿ’

Last Updated 17 ಜನವರಿ 2020, 4:39 IST
ಅಕ್ಷರ ಗಾತ್ರ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಮೂಲಕ ಹಿಂದೂ ರಾಷ್ಟ್ರ ನಿರ್ಮಾಣ ಮಾಡಲು ಬಿಜೆಪಿ ಮುಂದಾಗಿದ್ದು, ಅದಕ್ಕೆ ಅವಕಾಶ ನೀಡುವುದಿಲ್ಲ ಎಂದುವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸಿಎಎ, ಎನ್‌ಆರ್‌ಸಿ ಬಗ್ಗೆ ಪಕ್ಷದ ಪ್ರಮುಖರಿಗೆ ಜಾಗೃತಿ ಮೂಡಿಸುವ ಸಲುವಾಗಿ ಗುರುವಾರ ಕಾರ್ಯಾಗಾರ ಏರ್ಪಡಿಸಲಾಗಿತ್ತು.

‘ಸಿಎಎ, ಎನ್‌ಆರ್‌ಸಿ ರಾಕ್ಷಸೀ ಉದ್ದೇಶ ಹೊಂದಿದ್ದು, ಸಂವಿಧಾನ ವಿರೋಧಿಯಾಗಿದೆ. ಪಕ್ಷದ ನೇತೃತ್ವದಲ್ಲೇ ಹೋರಾಟ ರೂಪಿಸಬೇಕು. ಜೈಲಿಗೆ ಹೋದರೂ ಪರವಾಗಿಲ್ಲ, ಕಾಂಗ್ರೆಸ್‌ನ ಪ್ರತಿಯೊಬ್ಬರೂ ಪ್ರತಿಭಟನೆಗೆ ಇಳಿಯಬೇಕು’ ಎಂದು ಸಲಹೆ ಮಾಡಿದರು.

‘ಈ ಕಾನೂನಿನಿಂದ ಮುಸ್ಲಿಮರಷ್ಟೇ ಅಲ್ಲದೇ ಆದಿವಾಸಿಗಳು, ದಲಿತರು ಸಂಕಷ್ಟಕ್ಕೆ ಒಳಗಾಗುತ್ತಾರೆ. ಸಾಕಷ್ಟು ಮಂದಿಗೆ ಪೌರತ್ವ ಸಿಗುವುದಿಲ್ಲ. ಪ್ರಣಾಳಿಕೆಯಲ್ಲಿ ಹೇಳಿದಂತೆ ಎನ್‌ಆರ್‌ಸಿ ಜಾರಿಮಾಡುತ್ತಿರುವುದಾಗಿ ಪ್ರಧಾನಿ ಮೋದಿ, ಅಮಿತ್ ಶಾ ಹೇಳುತ್ತಾರೆ. ಪ್ರಣಾಳಿಕೆಯಲ್ಲಿರುವ ಬೇರೆ ವಿಚಾರಗಳನ್ನು ಏಕೆ ಜಾರಿಗೆ ತಂದಿಲ್ಲ ಎಂದು ಅವರು ಪ್ರಶ್ನಿಸಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ, ಪಕ್ಷದ ಮುಖಂಡರಾದ ಕೆ.ಎಚ್.ಮುನಿಯಪ್ಪ, ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT