ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೇಶವನ್ನು ಆಳುತ್ತಿರುವವರಿಗೆ ಸುಳ್ಳೇ ಬಂಡವಾಳ’

ಸಿಎಎ ವಿರುದ್ಧ ಮಹಿಳೆಯರ ಗುಡುಗು
Last Updated 18 ಜನವರಿ 2020, 21:29 IST
ಅಕ್ಷರ ಗಾತ್ರ

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಹೋರಾಟಗಳು ಮುಂದುವರಿದಿದ್ದು, ಶನಿವಾರವೂ ನಗರದಲ್ಲಿ ನೂರಾರು ಮಹಿಳೆಯರು ಪ್ರತಿಭಟನೆ ಹಾಗೂ ಸಮಾವೇಶ ನಡೆಸಿದರು.

ಕಂಟೋನ್ಮೆಂಟ್ ಸಮೀಪದ ಈದ್ಗಾ ಮೈದಾನದಲ್ಲಿ ಸೇರಿದ್ದ ಮಹಿಳೆಯರು, ‘ಸಿಎಎ ಹಾಗೂ ಎನ್‌ಆರ್‌ಸಿ ಬೇಡವೇ ಬೇಡ’ ಎಂಬ ಘೋಷಣಾ ಫಲಕಗಳನ್ನು ಪ್ರದರ್ಶಿಸಿದರು. 'ಜಂಟಿ ಕ್ರಿಯಾ ಸಮಿತಿ ಕರ್ನಾಟಕ' ಸಂಘಟನೆ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

‘ಸುಳ್ಳುಗಳನ್ನೇ ಬಂಡವಾಳ ಮಾಡಿಕೊಂಡವರು ನಮ್ಮ ದೇಶವನ್ನು ಆಳುತ್ತಿದ್ದಾರೆ. ಸಂವಿಧಾನ ತಿರುಚಿ ದೇಶವನ್ನು ಒಡೆಯುತ್ತಿದ್ದಾರೆ.ಸಂವಿಧಾನ ಉಳಿಸಲು ನಾವೆಲ್ಲರೂ ಇಂದು ಬೀದಿಗೆ ಬಂದು ಹೋರಾಟ ಮಾಡುತ್ತಿದ್ದೇವೆ. ಇದು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಗಂಟೆ’ ಎಂದು ಪ್ರತಿಭಟನಾಕಾರರು ಗುಡುಗಿದರು.

‘ಶಾಂತಿ ಪ್ರಿಯರ ದೇಶ ನಮ್ಮದು. ಸೂಫಿ–ಸಂತರ ನಾಡು ನಮ್ಮದು. ಇದುವರೆಗೂ ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯುವ ಕೆಲಸಕ್ಕೆ ಆಸ್ಪದ ಸಿಕ್ಕಿರಲಿಲ್ಲ. ಇಂದಿನ ಕೇಂದ್ರ ಸರ್ಕಾರ ಮಾತ್ರ ಅಂಥ ಕೆಲಸ ಮಾಡುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದೆ’ ಎಂದು ದೂರಿದರು.

‘ದೇಶದಲ್ಲಿ ಬಡತನ, ನಿರುದ್ಯೋಗ ಹೆಚ್ಚಾಗುತ್ತಿದೆ. ಪೂರ್ಣ ಬಹಮತ ಪಡೆದಿರುವ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೆಲಸಕ್ಕೆ ಬಾರದ ಕಾಯ್ದೆ ಜಾರಿಗೆ ತಂದು ಅಶಾಂತಿ ವಾತಾವರಣ ನಿರ್ಮಿಸಿದೆ’ ಎಂದು ಪ್ರತಿಭಟನಾಕಾರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT