ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಅಧೀನದ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಎಸ್‌ಎಚ್‌ಡಿಪಿ) ಅಡಿಯಲ್ಲಿ ಎರಡು ಘಟ್ಟಗಳಲ್ಲಿ ₹ 9,000 ಕೋಟಿ ವೆಚ್ಚದಲ್ಲಿ 2,500 ಕಿ.ಮೀ. ರಸ್ತೆಯನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವಕ್ಕೆ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಇದು ಎಸ್‌ಎಚ್‌ಡಿಪಿಯ ಐದನೇ ಹಂತ. ಮೊದಲ ಘಟ್ಟದಲ್ಲಿ ₹ 4,000 ಕೋಟಿ ವೆಚ್ಚದಲ್ಲಿ 1,200 ಕಿ.ಮೀ. ಉದ್ದ ರಸ್ತೆಗಳನ್ನು ರಾಜ್ಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಎರಡನೇ ಘಟ್ಟದಲ್ಲಿ ₹ 5,000 ಕೋಟಿ ವೆಚ್ಚದಲ್ಲಿ 1,300 ಕಿ.ಮೀ. ಉದ್ದದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ. ಮೊದಲ ಘಟ್ಟದ ಕಾಮಗಾರಿಗಳು ಪ್ರಸಕ್ತ ಆರ್ಥಿಕ ವರ್ಷದಿಂದಲೇ ಆರಂಭವಾಗಲಿವೆ. ಎರಡನೇ ಘಟ್ಟದ ಕಾಮಗಾರಿಗಳು 2027–28ನೇ ಆರ್ಥಿಕ ವರ್ಷದಲ್ಲಿ ಆರಂಭವಾಗುತ್ತವೆ.

ಎಸ್‌ಎಚ್‌ಡಿಪಿ ಕಾಮಗಾರಿಗಳನ್ನು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್‌ವೈ) ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಅದರ ಪ್ರಕಾರ, ರಸ್ತೆಯನ್ನು ಮೇಲ್ದರ್ಜೆಗೇರಿಸಿದ ನಂತರದ ಐದು ವರ್ಷಗಳವರೆಗೆ ಗುತ್ತಿಗೆದಾರರೇ ನಿರ್ವಹಣೆ ಮಾಡಬೇಕು. ಐದು ವರ್ಷ ಪೂರ್ಣಗೊಂಡ ಬಳಿಕ ಮತ್ತೊಮ್ಮೆ ಡಾಂಬರೀಕರಣ ಹಾಗೂ ಇತರ ಕಾಮಗಾರಿಗಳನ್ನು ಪೂರ್ಣಗೊಳಿಸಿ ರಸ್ತೆಯನ್ನು ಹಸ್ತಾಂತರಿಸಬೇಕಾಗುತ್ತದೆ.

2011ರಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಆರಂಭಿಸಲಾಗಿತ್ತು. ಈವರೆಗೆ 11,700 ಕಿ.ಮೀ. ಉದ್ದದ ರಸ್ತೆಗಳನ್ನು ಸುಧಾರಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.